‘ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’
'I am satisfied with my administration'
ಹಾವೇರಿ: ಜನರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಹಾವೇರಿಯಲ್ಲಿ ಮಾತನಾಡಿದ ಅವರು "ಹಾವೇರಿಗೆ ಮೆಡಿಕಲ್ ಕಾಲೇಜನ್ನು ಘೋಷಣೆ ಮಾಡಿದ್ದೂ ನಾನೇ, ಈಗ ಉದ್ಘಾಟನೆ ಮಾಡುತ್ತಿರುವುದೂ ನಾನೇ. ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಈ ಕಾಲೇಜನ್ನು ನಿರ್ಮಿಸಲಾಗಿದೆ," ಎಂದು ತಿಳಿಸಿದರು.
ಅರಸು ಅವರ ದಾಖಲೆ ಮುರಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜನರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿಯಿದೆ ಎಂದರು. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಅವರ ಅವಧಿಯಲ್ಲಿ ಮೆಡಿಕಲ್ ಕಾಲೇಜು ಕೆಲಸವನ್ನು ಯಾಕೆ ಪೂರ್ಣಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.
"ಅನ್ನಭಾಗ್ಯ, ಕೃಷಿ ಭಾಗ್ಯ, ಮನಸ್ವಿನಿ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಕೊಟ್ಟವರು ಯಾರು? ಎಸ್ಸಿಪಿ-ಟಿಎಸ್ಪಿ ಯೋಜನೆ ಜಾರಿಗೆ ತಂದವರು ಯಾರು? ಇದನ್ನು ಜನರು ಕೇಳಬೇಕು," ಎಂದು ಸವಾಲು ಹಾಕಿದರು.
ವರ್ಷಕ್ಕೆ 3 ಲಕ್ಷ ಮನೆ ಕಟ್ಟುವುದಾಗಿ ಹೇಳಿದ್ದೆವು, ಅದರಂತೆ ಈವರೆಗೆ 14,52,000 ಮನೆಗಳನ್ನು ನಿರ್ಮಿಸಿದ್ದೇವೆ. ಕಳೆದ 5 ವರ್ಷಗಳಲ್ಲಿ ಬಿಜೆಪಿಯವರು ಎಷ್ಟು ಮನೆ ಕಟ್ಟಿಸಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆಯಲ್ಲಿ ನಮಗೆ ಸಿಗುತ್ತಿರುವುದು ತುಂಬಾ ಕಡಿಮೆ. "ನಾವು ಒಂದು ರೂಪಾಯಿ ತೆರಿಗೆ ಕೊಟ್ಟರೆ ವಾಪಸ್ ಸಿಗುತ್ತಿರುವುದು ಕೇವಲ 14 ರಿಂದ 15 ಪೈಸೆ ಮಾತ್ರ. ಇದರಿಂದ ರಾಜ್ಯಕ್ಕೆ ವಾರ್ಷಿಕ 10 ರಿಂದ 12 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ,". ಅಲ್ಲದೆ ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಅನುದಾನ ನೀಡಿಲ್ಲ ಎಂದು ದೂರಿದರು.
ಇನ್ನು ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು "ಆ ಮಹಿಳೆಯೇ ವಿವಸ್ತ್ರಗೊಂಡು ಮಹಿಳಾ ಪೊಲೀಸರಿಗೆ ಕಚ್ಚಿದ್ದಾರೆ. ಇದು ಅತ್ಯಂತ ಕೆಟ್ಟ ನಡವಳಿಕೆ. ಕಾನೂನು ಕೈಗೆತ್ತಿಕೊಂಡರೆ ಕ್ರಮ ಅನಿವಾರ್ಯ," ಎಂದರು.
ಬಳ್ಳಾರಿಯಲ್ಲಿ ಬ್ಯಾನರ್ ಹರಿದು ಗಲಾಟೆ ಮಾಡಲು ಪ್ರಚೋದನೆ ನೀಡಿದವರು ಯಾರು ಎಂಬುದು ಎಲ್ಲರಿಗೂ ಗೊತ್ತು. ಅವರಿಗೆ ನಮ್ಮ ಬೆಳವಣಿಗೆಯ ಅಸೂಯೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು. ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಪ್ರಶ್ನೆಗೆ ಉತ್ತರಿಸಿದ ಅವರು, "ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ," ಎಂದು ಮಾರ್ಮಿಕವಾಗಿ ನುಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 