‘ವೃತ್ತಿ-ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ’

‘ವೃತ್ತಿ-ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ’ 'It is necessary to maintain a balance between professional and personal life'

ವಿಜಯಪುರ 29: ವೃತ್ತಿ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಪ್ರೊ. ಚಂದ್ರಮ್ಮಾ ಹೇಳಿದರು. 

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೇವರ ಹಿಪ್ಪರಗಿ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಉನ್ನತ ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಕರ್ನಾಟಕ ಸರ್ಕಾರ, ಬೆಂಗಳೂರು ಇವರ ಸಹಯೋಗದಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ‘ಕೆಲಸಹೀಜೀವನ ಸಮತೋಲನ’ ಎಂಬ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.  

ಮಹಿಳೆಯರಿಗೆ ಸರಿಯಾದ ಶಿಕ್ಷಣ ಮತ್ತು ಜಾಗೃತಿಯನ್ನು ನೀಡಿದರೆ ಸಮಾಜದಲ್ಲಿರುವ ಹಲವು ಮಹಿಳಾ ವಿರೋಧಿ ಹಿಂಸೆಗಳಿಂದ ಹೊರಬರಲು ಸಾಧ್ಯವಾಗುತ್ತದೆ. ಮಾನಸಿಕ ಒತ್ತಡದ ನಿಯಂತ್ರಣ, ಸಮಯದ ಸರಿಯಾದ ಬಳಕೆ, ಮತ್ತು ಅಗತ್ಯವಾದ ವಿಶ್ರಾಂತಿ ಇವುಗಳ ಮೂಲಕ ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳಬಹುದು ಎಂದರು.  

ಇದೇ ಸಂದರ್ಭದಲ್ಲಿ ಧಾರವಾಡದ ಮನೋವೈಧ್ಯಕೀಯ ಸಮಾಜ ಕಾರ್ಯಕರ್ತೆ ಡಾ. ಶ್ರೀದೇವಿ ಬೀರಾದಾರ ಮಾತಾನಾಡಿ, ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ನಮ್ಮೆಲ್ಲರ ಕೈಯಲ್ಲಿರುವ ವಿಷಯ. ನಾಟಕೀಯ ಬದುಕಿನ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವುದೇ ಹವ್ಯಾಸ ಇದ್ದರೆ ಅದನ್ನು ನಿಯಮಿತವಾಗಿ ಮಾಡುತ್ತಿರಬೇಕು ಹಾಗೂ ನಮ್ಮನ್ನು ನಾವು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  

ಕಾರ್ಯಾಗಾರದಲ್ಲಿ ದೇವರ ಹಿಪ್ಪರಗಿಯ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ವಾಣಿಜ್ಯ ಅಧ್ಯಯನ ವಿಭಾಗದ ಪ್ರೊ. ರಮೇಶ ಬೆಳ್ಳೊಳ್ಳಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ದೇವರ ಹಿಪ್ಪರಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಧ್ಯಯನ ವಿಭಾಗದ ಪ್ರೊ. ಲಕ್ಷೀಶ ಮತ್ತು ಪ್ರೊ. ಬಗಲಿ ಹಾಗೂ ಅವಿನಾಶ ಹೊಸಮನಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.  

ಕಾರ್ಯಾಗಾರದ ಸಂಯೋಜಕಿ ಹಾಗೂ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷಿದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಪ್ರೇಮಕುಮಾರಿ ಸ್ವಾಗತಿಸಿದರು. ಇಂಗ್ಲೀಷ ಅಧ್ಯಯನ ವಿಭಾಗದ ಉಪನ್ಯಾಸಕಿ ಡಾ. ಜ್ಯೋತಿ ಹೂಗಾರ ಅತಿಥಿಯರನ್ನು ಪರಿಚಯಿಸಿದರು. ಡಾ. ಭಾಗ್ಯಶ್ರೀ ದೊಡಮನಿ ನಿರೂಪಿಸಿದರು.