'ಎಚ್‌ಡಿಕೆ ಸಿಎಂ ಮಾಡುವುದು ಮೋದಿ, ಶಾ ತೀರ್ಮಾನದಲ್ಲಿದೆ'
'It is up to Modi, Shah to decide whether to make HDK CM'
"ಜಯಪುರ: 'ಎಚ್.ಡಿ.ಕುಮಾರಸ್ವಾ"ು ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದು ನನ್ನ ಕೈಯಲ್ಲಿಲ್ಲ. ಅದೇನಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅ"ುತ್ ಶಾ ತೀರ್ಮಾನ ಮಾಡಬೇಕು' ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಬೆಳ್ಳಿಹಬ್ಬದ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜನತಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
'ನಾವು(ಜೆಡಿಎಸ್) ಎನ್ಡಿಎಗೆ ಕೊಡುವ ಶಕ್ತಿಯನ್ನು ಗುರುತಿಸಿ, ಬಳಸಿಕೊಳ್ಳುವ ರಾಜಕೀಯ ಜಾಣ್ಮೆ, ಪ್ರಬುದ್ಧತೆ ಮೋದಿ, ಶಾ ಅವರಿಗಿದೆ. ಎನ್ಡಿಎ ಮತ್ತಷ್ಟು ಗಟ್ಟಿಗೊಳಿಸುವ "ಶ್ವಾಸವೂ ಇದೆ' ಎಂದರು.
'ನನಗೆ ಈಗಾಗಲೇ 93 ವರ್ಷ ವಯಸ್ಸಾಗಿದೆ. ನಾನು ಮತ್ತೆ ಮಂತ್ರಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವ ಇಚ್ಛೆ ಇಲ್ಲ. ಈ ಶರೀರದಿಂದ ಆತ್ಮ ಹೊರ ಹೋಗುವ ಮುನ್ನಾ ರಾಜ್ಯದಲ್ಲಿ ಯೋಗ್ಯ ಆಡಳಿತ ಕೊಡುವ ಸರ್ಕಾರ ಬರಲಿದೆ. ಅದನ್ನು ಮೋದಿ ಮಾಡಲಿದ್ದಾರೆ' ಎಂದರು.
'ಆಲಮಟ್ಟಿ ಜಲಾಶಯವನ್ನು 524 "ುಟರ್ಗೆ ಎತ್ತರಿಸಲು ನ್ಯಾಯಾಧೀಕರಣ ಅವಕಾಶ ಕೊಟ್ಟಿದೆ. ಅದರ ಅನುಷ್ಠಾನಕ್ಕೆ ಹೋರಾಟ ನಡೆಸುತ್ತೇನೆ' ಎಂದು ಭರವಸೆ ನೀಡಿದರು. 'ಮೈಸೂರು, ಕಿತ್ತೂರು, ಕಲ್ಯಾಣ ಕರ್ನಾಟಕ ಎಂದು ರಾಜ್ಯವನ್ನು ಮೂರು ಭಾಗವಾಗಿ "ಂಗಡಿಸುವ ಅಗತ್ಯ ಇಲ್ಲ, ನಾವೆಲ್ಲ ಒಂದೇ ತಾು ಮಕ್ಕಳು.ಒಟ್ಟಾಗಿ ಇರೋಣ, ಸಮೃದ್ಧ ಕರ್ನಾಟಕ ಕಟ್ಟೋಣ' ಎಂದು ಕರೆ ನೀಡಿದರು.
'ನನ್ನ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಆಡಳಿತ ಕೊಟ್ಟ ರಾಜ್ಯ ಸರ್ಕಾರವನ್ನು ನೋಡಿಲ್ಲ' ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ "ರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯದ ನಗೆ ಬೀರಿದ ದೇವೇಗೌಡರು, 'ದುಡಿಯುವ ಕೈಗೆ ಉದ್ಯೋಗ ನೀಡುವ ಕಾರ್ಯ ಮಾಡಬೇಕು' ಎಂದರು. ತಮ್ಮ ಆತ್ಮ ಚರಿತ್ರೆ 'ನೇಗಿಲ ಗೆರೆಗಳು' ಪುಸ್ತಕವನ್ನು ಸಮಾವೇಶದಲ್ಲಿ ಪ್ರದರ್ಶಿಸಿ, ಅದರಲ್ಲಿ ಪ್ರಸ್ತಾಪವಾಗಿರುವ ಹಳೆಯ ರಾಜಕೀಯ ಘಟನೆಗಳನ್ನು ಮೆಲಕು ಹಾಕಿದರು. ಯುವ ಶಾಸಕರು, ರಾಜಕೀಯ ಮುಖಂಡರು ಓದುವಂತೆ ಸಲಹೆ ನೀಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 