‘ಪಕ್ಷದ ವಿಚಾರದಲ್ಲಿ ನಿತಿನ್ ನಮ್ಮ ಬಾಸ್, ನಾನು ಸಾಮಾನ್ಯ ಕಾರ್ಯಕರ್ತ’
'Nitin is our boss when it comes to party matters, I am an ordinary worker'
ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ (ಜ.20) ಪದಗ್ರಹಣ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದರು.
"ಮೊದಲ ಬಾರಿಗೆ ಬಿಜೆಪಿ ಸ್ವಂತವಾಗಿ ಪೂರ್ಣ ಬಹುಮತ ಗಳಿಸಿದೆ. ನಂತರ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಸರ್ಕಾರ ರಚಿಸಿದೆ" ಎಂದು ಪ್ರಧಾನಿ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
"ಪಕ್ಷದ ವಿಷಯಕ್ಕೆ ಬಂದರೆ, ನಿತಿನ್ ನಬಿನ್ ನಮ್ಮ ಬಾಸ್ ಮತ್ತು ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ" ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದರು.
ಬಿಜೆಪಿ ಪರಿವಾರ ಇಂದು ದೊಡ್ಡದಾಗಿದೆ. ಈ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ಇನ್ನಷ್ಟು ಕೆಲಸ ಮಾಡಬೇಕು. ಹೊಸ ಅಧ್ಯಕ್ಷ ನಿತಿನ್ ಗೆ ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಅವರು ವಿಶ್ವದ ಅತೀ ದೊಡ್ಡ ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದರು. ನಮ್ಮ ಶ್ರಮ ಕಾರ್ಯಕರ್ತರಿಂದ ನನಸಾಗುತ್ತಿದೆ. ಈ ಹಿಂದೆ ವೆಂಕಯ್ಯ ನಾಯ್ಡು, ನಡ್ಡಾ ಪಕ್ಷಕ್ಕಾಗಿ ತುಂಬಾ ಕೆಲಸ ಮಾಡಿದ್ದಾರೆ. ಪ್ರತೀ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯಬೇಕು. ಕಾರ್ಯಕರ್ತರನ್ನು ಬಿಜೆಪಿ ಗೌರವಿಸುತ್ತದೆ. ನಮ್ಮ ಸಂಕಲ್ಪ ದೊಡ್ಡ ಮಟ್ಟದಲ್ಲಿ ನನಸಾಗಬೇಕು ಎಂದು ಪ್ರಧಾನಿ ಹೇಳಿದರು.
ಇದಕ್ಕೂ ಮೊದಲು, ಜೆಪಿ ನಡ್ಡಾ ಅವರು ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ್ದು. ಅವರು ನಿತಿನ್ ನಬಿನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು."ಪ್ರಧಾನಿ ಮೋದಿ ಜೀ ಅವರ ನಾಯಕತ್ವ ಮತ್ತು ನಿತಿನ್ ನಬಿನ್ ಜೀ ಅವರ ಅಧ್ಯಕ್ಷತೆಯಲ್ಲಿ, ಭಾರತೀಯ ಜನತಾ ಪಕ್ಷವು ಮುಂಬರುವ ದಿನಗಳಲ್ಲಿ ಬಂಗಾಳದಲ್ಲಿ ಕಮಲ ಅರಳಲಿದೆ. ನಾವು ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಸರ್ಕಾರ ರಚಿಸುತ್ತೇವೆ. ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ಕೇರಳದಲ್ಲಿಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತೇವೆ. ನಾವು ಈ ವಿಶ್ವಾಸದೊಂದಿಗೆ ಮುಂದುವರಿಯುತ್ತಿದ್ದೇವೆ ಎಂದು ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 