ತುಳುನಾಡಿನ ಕಂಬಳ ಕುರಿತ ’ವೀರ ಕಂಬಳ’ ಫೆಬ್ರವರಿ 27ರಂದು ಸಿನಿಮಾ ತೆರೆಗೆ
'Veera Kambala', a movie about Tulu Nadi's Kambala, will hit the screens on February 27
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಬಹು ನೀರೀಕ್ಷಿತ ‘ವೀರ ಕಂಬಳ’ ಸಿನಿಮಾ ಈ ಶುಕ್ರವಾರ (ಫೆ. 27) ರಾಜ್ಯಾದ್ಯಂತ ವಿಜಯ್ ಸಿನಿಮಾಸ್ ಮುಖೇನ ಬಿಡುಗಡೆ ಆಗುತ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸೌಂಡ್ ಮಾಡಿರುವ ಚಿತ್ರದ ನಾಯಕನಾಗಿ ಆದಿತ್ಯ ಅಭಿನಯ ಮಾಡಿದ್ದಾರೆ. ಚಿತ್ರವನ್ನು ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ ಬ್ಯಾನರ್ನಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ರಾಜೇಶ್ ಕುಡ್ಲ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು ಸೆಳೆಯುತ್ತಾ ಬಂದಿದೆ.
ಆದರೆ, ಅದನ್ನು ಇಡಿಯಾಗಿ ದೃಷ್ಯಗಳಲ್ಲಿ ಹಿಡಿದಿಡುವಂಥಾ ಪ್ರಯತ್ನಗಳು ನಡೆದಿರಲಿಲ್ಲ. ಇದೀಗ ಆ ಪ್ರಯತ್ನವನ್ನು ಮೂಲತಃ ದಕ್ಷಿಣ ಕನ್ನಡ ಭಾಗದವರಾದ ರಾಜೇಂದ್ರ ಸಿಂಗ್ ಬಾಬು ಅವರು ಮಾಡಿದ್ದಾರೆ. ’ವೀರ ಕಂಬಳ’ದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಸುತ್ತಾ ಘಟಿಸುವ ರೋಚಕ ಕಥೆ ಇದೆ. ಅಂದಂಗೆ ಈ ಸಿನಿಮಾ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿದ್ದು, ತುಳುನಲ್ಲಿ ’ಬಿರ್ದ್ದ ಕಂಬುಳ’ ಎಂದು ಹೆಸರಿಡಲಾಗಿದೆ. ಕಂಬಳದ ಸುತ್ತಾ ಮುಂಬೈ ಭೂಗತ ಜಗತ್ತಿನ ನಂಟಿರುವ ರೋಚಕ ಅಂಶಗಳೊಂದಿಗೆ ಈ ಕಥನ ಸೃಷ್ಟಿಯಾಗಿರುವುದು ವಿಶೇಷ. ಚಿತ್ರದ ಮುಖ್ಯ ಪಾತ್ರಗಳಲ್ಲಿ ಪ್ರಕಾಶ್ ರೈ, ರವಿಶಂಕರ್ ಇದ್ದು, ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ.
ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರಿ್ಗರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸ ಈ ಚಿತ್ರಕ್ಕಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 