'ವೋಟ್ ಚೋರಿ ದೇಶ ವಿರೋಧಿ ಕೃತ್ಯವೆಂದ ರಾಗಾ
'Vote theft is an anti-national act,' says Raaga
New Delhi. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, ವೋಟ್ ಚೋರಿಯನ್ನು ರಾಷ್ಟ್ರವಿರೋಧಿ ಕೃತ್ಯ ಎಂದು ಕರೆದರು. ಚುನಾವಣಾ ಆಯೋಗವು ನಾಗರಿಕರನ್ನು ಗೊಂದಲಕ್ಕೀಡುಮಾಡುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಸಮಯದಲ್ಲಿ ಅಳಿಸಬಹುದಾದ ಶಾಯಿಯನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ನಂಬಿಕೆ ಕುಸಿದಿದೆ ಎಂದು ಟೀಕಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, ವೋಟ್ ಚೋರಿಯನ್ನು ರಾಷ್ಟ್ರವಿರೋಧಿ ಕೃತ್ಯ ಎಂದು ಕರೆದರು. ಚುನಾವಣಾ ಆಯೋಗವು ನಾಗರಿಕರನ್ನು ಗೊಂದಲಕ್ಕೀಡುಮಾಡುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ (SEC) ನಿನ್ನೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಸಮಯದಲ್ಲಿ ಅಳಿಸಬಹುದಾದ ಶಾಯಿಯನ್ನು ಬಳಸಿತ್ತು ಎಂಬ ದೂರುಗಳ ತನಿಖೆಗೆ ಆದೇಶಿಸಿದೆ. ಈ ವಿಷಯದ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಚುನಾವಣಾ ಆಯೋಗ ಎಚ್ಚರಿಸಿದೆ.
ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪ ಮಾಡಿದ್ದರು. ರಾಜ್ಯ ಚುನಾವಣಾ ಆಯುಕ್ತ ದಿನೇಶ್ ವಾಘ್ಮೋರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟದ ಪರವಾಗಿದ್ದಾರೆ, ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.
ಈ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ವಾಘ್ಮೋರೆ ತನಿಖೆಗೆ ಆದೇಶ ನೀಡಿದರು. ಅಸಿಟೋನ್ ಅಥವಾ ಉಗುರು ಬಣ್ಣವನ್ನು ಬಳಸಿ ಶಾಯಿಯನ್ನು ತೆಗೆಯಬಹುದು ಎಂಬ ಹೇಳಿಕೆಗಳು ಸುಳ್ಳು. ಶಾಯಿಯನ್ನು ತೆಗೆದುಹಾಕಲು ಅಥವಾ ಮತದಾರರಲ್ಲಿ ತಪ್ಪು ಮಾಹಿತಿಯನ್ನು ಹರಡಲು ಪ್ರಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 