‘ಮುಂಬೈ ಪೊಲೀಸರಿಗೆ ಸಿಗುವ ಮಾಹಿತಿ , ನಿಮಗೆ ಏಕೆ ಸಿಗಲ್ಲ’
'Why can't you get the information that Mumbai Police gets'
ಬೆಂಗಳೂರು: ನಗರದ ವೈಟ್ಫೀಲ್ಡ್ ವಿಭಾಗದಲ್ಲಿ ಇತ್ತೀಚೆಗೆ ಮುಂಬೈ ಪೊಲೀಸರು ಡ್ರಗ್ಸ್ ಪ್ರಕರಣ ಪತ್ತೆ ಹಚ್ಚಿರುವ ಕುರಿತು ಬೇಸರಗೊಂಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು, ಬೆಂಗಳೂರು ಪೊಲೀಸರ ಕಾರ್ಯವೈಖರಿ ವಿರುದ್ಧ ಗರಂ ಆಗಿದ್ದಾರೆ.
ಭಾನುವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಫ್ರೀ ಹ್ಯಾಂಡ್ ಕೊಟ್ಟಿದ್ದರೂ ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ಸಮಸ್ಯೆ ಏನು ಎಂದು ಪ್ರಶ್ನಿಸಿದ ಅವರು, ಇಬ್ಬರು ಡಿಸಿಪಿಗಳನ್ನು ನಿಲ್ಲಿಸಿಕೊಂಡೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ನಿಮ್ಮ ವ್ಯಾಪ್ತಿಯಲ್ಲಿ ಏನೆಲ್ಲ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಬಗ್ಗೆ ಮಾಹಿತಿ ಇಲ್ಲವಾದರೆ, ಬೇರೆ ಯಾವ ರೀತಿ ಕೆಲಸ ಮಾಡುತ್ತಿದ್ದಿರಿ, ಡ್ರಗ್ಸ್ ಪ್ರಕರಣದ ಕುರಿತು ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ಡಿಸಿಪಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ಬಾರಿ ಸಭೆಯಲ್ಲಿ ನೂರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ್ದೇವೆ ಎಂದು ಹೇಳಿಕೊಂದು ನಿಮ್ಮ ಬೆನ್ನು ನೀವೇ ತಟ್ಟಿಕೊಂಡರೆ ಮುಗಿಯಿತೇ, ನಿಮ್ಮ ಕರ್ತವ್ಯದ ಬಗ್ಗೆ ಅರಿವಿರಲಿ. ಇದೇ ರೀತಿ ನಿರ್ಲಕ್ಷ್ಯತನ ಮುಂದುವರಿದರೆ, ಸುಮ್ಮನಿರುವುದಿಲ್ಲ. ಯಾರು ಶಿಫಾರಸನ್ನೂ ಕೇಳುವುದಿಲ್ಲ. ನನಗೆ ಯಾವ ಮುಲಾಜು ಇಲ್ಲ ಎಂದು ಐಪಿಎಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಹೊಸ ವರ್ಷ ಆಚರಣೆ ಮಾಡುವ ಸಂದರ್ಭದಲ್ಲಿ ಇಂತಹ ಸಭೆ ಮಾಡುವುದು ಸಾಮಾನ್ಯ ಎಂಬುದು ಆಗಬಾರದು. ಒಂದು ರೀತಿಯಲ್ಲಿ ಕಾರ್ಯಪ್ರವೃತ್ತಿ ಆಗಬೇಕು. ಪ್ರತಿ ವರ್ಷವೂ ನಗರದಲ್ಲಿ ಸಾರ್ವಜನಿಕರು ಆಚರಣೆ ಮಾಡುತ್ತಾರೆ, ಸಭೆ ಮಾಡುತ್ತೇವೆ. ಇದಷ್ಟೆ ಅಲ್ಲ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ಹೊಸ ವರ್ಷಾಚರಣೆ ಮಾಡಲು ಬೆಂಗಳೂರಿಗೆ ಹೋಗಬೇಕು ಎಂಬ ಮಟ್ಟಿಗೆ ಎಲ್ಲ ಕಡೆ ಚರ್ಚೆಗಳು ನಡೆಯುತ್ತಿವೆ. ಒಂದು ಸಣ್ಣ ಕೆಟ್ಟ ಘಟನೆ ನಡೆದರೂ ಪೊಲೀಸ್ ಇಲಾಖೆ ಮತ್ತು ಸರ್ಕಾರವನ್ನು ತಲೆತಗ್ಗಿಸುವಂತೆ ಮಾಡಬಹುದು.
ಬೆಂಗಳೂರಿನಲ್ಲಿ ಯಾವುದೇ ಘಟನೆ ನಡೆದರೂ ರಾಷ್ಟ್ರ ಮಟ್ಟದಲ್ಲಿ ಚರ್ಚಿ ನಡೆಯುತ್ತದೆ. ಬೆಂಗಳೂರು ಸುರಕ್ಷಿತವಲ್ಲ ಎಂದು ಅಪಪ್ರಚಾರ ಮಾಡುತ್ತಾರೆ. ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಲುವುದಿಲ್ಲ. ಬದ್ಧತೆಯಿಂದ ಕೆಲಸ ಮಾಡಬೇಕು. ಇನ್ನು ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ 15 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಣ್ಣ ಘಟನೆಯಾದರು ನಾನು ಸುಮ್ಮನಿರುವುದಿಲ್ಲ. ಎಲ್ಲ ವಿಭಾಗದ ಡಿಸಿಪಿ, ಎಸಿಪಿಗಳಿಗೆ ದೊಡ್ಡ ಜವಾಬ್ದಾರಿ ಇದೆ. ಪೊಲೀಸ್ ಇಲಾಖೆಯ ಗೌರವದ ಪ್ರಶ್ನೆ. ಸಂಭ್ರಮಾಚರಣೆ ಸಂದರ್ಭದಲ್ಲಿ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 