*ಮಾಚಿದೇವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಯ ಸಂತೋಷ ಬಂಡೆ
*Machideva's ideals are eternally applicable happiness rock
*ಮಾಚಿದೇವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಯ ಸಂತೋಷ ಬಂಡೆ
ಇಂಡಿ 1: 12 ನೇ ಶತಮಾನದಲ್ಲಿ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ ಜನರಲ್ಲಿ ಭಕ್ತಿ ಪ್ರಧಾನ ಚಿಂತನೆಗಳನ್ನು ಮೂಡಿಸಿದ ಮಾಚಿದೇವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು. ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕಲ್ಯಾಣ ಕ್ರಾಂತಿಯ ಕೊನೆಯ ಘಟ್ಟದ ಹೋರಾಟದಲ್ಲಿ ಮಾಚಿದೇವರು ತಮ್ಮ ಪರಾಕ್ರಮದಿಂದ ವಚನ ಸಾಹಿತ್ಯ ಉಳಿಸುವಲ್ಲಿ ಅನುಪಮ ಸೇವೆಗೈದಿದ್ದಾರೆ. ಮಡಿವಾಳ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ, ದಿಟ್ಟ ಗಣಾಚಾರಿ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಹಿರೇರೂಗಿ ಉರ್ದು ಕ್ಲಸ್ಟರ್ ಸಿ ಆರ್ ಪಿ ಬಾದಶಾ ಚಪ್ಪರಬಂದ ಮಾತನಾಡಿ, ಮೇಲು ಕೀಳು, ಬಡವರು ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾದವರ ಬಗ್ಗೆ ಚಿಂತಿಸಿ,ವ್ಯಕ್ತಿ-ವ್ಯಕ್ತಿಗಳ ನಡುವೆ ಇರುವ ಅಂತರವನ್ನು ಹೋಗಲಾಡಿಸಲು ಹೋರಾಡಿದ ಮಾಚಿದೇವರ ಜೀವನ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಹೇಳಿದರು. ಮುಖ್ಯ ಶಿಕ್ಷಕ ಎಸ್ ಎಸ್ ಅರಬ, ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಬೇಗಂ ಮುಲ್ಲಾ, ಕಮಲಾ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 