ನವದೆಹಲಿ: ಗೋರಕ್ಷಕರ ಹೆಸರಿನಲ್ಲಿ ಮತ್ತು ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ವ್ಯಕ್ತಿಗಳ ಮೇಲೆ ಗುಂಪು ಗುಂಪಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಗಳು ಹೆಚ್ಚಿತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸಕರ್ಾರ, ಇದನ್ನು ತಡೆಗಟ್ಟಲು ಉನ್ನತ ಮಟ್ಟದ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಸಾಮೂಹಿಕ ಹಲ್ಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡುವಂತೆ ತಿಳಿಸಲಾಗಿದೆ.
ಈ ಸಮಿತಿಯಲ್ಲಿ ಕಾನೂನು, ನ್ಯಾಯಾಂಗ, ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ಕಾರ್ಯದಶರ್ಿಗಳು, ತಜ್ಞರು ಸದಸ್ಯರಾಗಿದ್ದಾರೆ.
ಈ ನಡುವೆ ಗೃಹ ಸಚಿವ ರಾಜ್ನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ಸಮಿತಿಯನ್ನು ಸಹ ರಚಿಸಲಾಗಿದ್ದು, ಉನ್ನತ ಮಟ್ಟದ ಸಮಿತಿಯು ಸಲಹೆ, ಸೂಚನೆ, ಶಿಫಾರಸುಗಳನ್ನು ಸಚಿವರ ಸಮಿತಿಗೆ ಸಲ್ಲಿಸಲಿದೆ.
ಸಚಿವರ ಸಮಿತಿ ರಾಜೀವ್ ಗೌಬಾ ನೇತೃತ್ವದ ಸಮಿತಿಯುವ ನೀಡುವ ವರದಿಯನ್ನು ಪರಿಶೀಲಿಸಿ ಅಂತಿಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಿದೆ.