ಧಾರವಾಡ 17: ಫೆಬ್ರವರಿ 2 ರಂದು ಹುಬ್ಬಳ್ಳಿಗೆ ಉಪರಾಷ್ಟ್ರಪತಿಗಳಾದ ಎಂ. ವೆಂಕಯ್ಯ ನಾಯ್ಡು ಅವರು ಆಗಮಿಸಿ, ದೇಶಪಾಂಡೆ ಫೌಂಡೇಶನ್ನ ಕಾರ್ಯಕ್ರಮ ಹಾಗೂ ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಯಶಸ್ವಿ ಆಯೋಜನೆ ಮತ್ತು ಶಿಷ್ಟಾಚಾರ ಪಾಲನೆಗೆ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗುವುದು. ವಿವಿಧ ಇಲಾಖೆಗಳ ಅಧಿಕಾರಿಗಳು ಅಚ್ಚುಕಟ್ಟಾಗಿ ನಿಗದಿತ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆ. 1 ರಂದು ಸಂಜೆ ಹುಬ್ಬಳ್ಳಿಗೆ ಆಗಮಿಸುವ ಉಪರಾಷ್ಟ್ರಪತಿಯವರು ಸರ್ಕ್ಯೂ ಟ್ ಹೌಸ್ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ. 2 ರಂದು ಬೆಳಿಗ್ಗೆ ದೇಶಾಪಾಂಡೆ ಫೌಂಡೇಶನ್ ಆಯೋಜಿಸಿರುವ ಸ್ಕಿಲ್ ಇಂಡಿಯಾ ಟ್ರೇನಿಂಗ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ ಹುಬ್ಬಳ್ಳಿ-ಧಾರವಾಡ ಬಸ್ ತ್ವರಿತ ಸಾರಿಗೆ ವ್ಯವಸ್ಥೆ (ಎಚ್ಡಿಬಿಆರ್ಟಿಎಸ್) ಸೇವೆಗಳು, ಹೊಸ ಬಸ್ಗಳು ಹಾಗೂ ಇಂಟರ್ ಚೇಂಜ್ ವ್ಯವಸ್ಥೆಗೆ ಚಾಲನೆ ನೀಡುವರು. ರಾಯ್ಕರ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಗಣ್ಯಾತಿಗಣ್ಯರ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಬಹಳ ಮಹತ್ವಾದ್ದಾಗಿರುತ್ತದೆ. ಅವರನ್ನು ಬರಮಾಡಿಕೊಳ್ಳುವುದು, ವಾಹನಗಳ ಸಿದ್ಧತೆ, ವಸತಿ, ಭದ್ರತಾ ಕೊಠಡಿ, ವೈದ್ಯಕೀಯ ಸೌಕರ್ಯಗಳು, ತಜ್ಞವೈದ್ಯರ ತಂಡ, ವೇದಿಕೆಯ ಯೋಜನೆ ಸೇರಿದಂತೆ ಎಲ್ಲ ಸಿದ್ಧತೆಗಳು ಅಚ್ಚುಕಟ್ಟಾಗಿ ಇರಬೇಕು. ಅದೇ ದಿನ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ರಾಜ್ಯ ಸರ್ಕಾ ರದ ಅನೇಕ ಸಚಿವರು ಆಗಮಿಸುವುದರಿಂದ ವಾಹನ ಸಂಚಾರದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಎಚ್ಡಿಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇ ಶಕ ರಾಜೇಂದ್ರ ಚೋಳನ್ ಮಾತನಾಡಿ, ನಮ್ಮ ಕಾರ್ಯಕ್ರಮವು ಸಾರ್ವಜನಿಕ ವಲಯದ ಸಕರ್ಾರಿ ಕಾರ್ಯಕ್ರಮವಾಗಿರುವದರಿಂದ ಆಹ್ವಾನ ಪತ್ರಿಕೆ ಸೇರಿದಂತೆ ಎಲ್ಲವೂ ನಿಯಮಾನುಸಾರ ನಡೆಯಬೇಕು. ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಶಿಸ್ತಿನಿಂದ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿ.ಪಂ. ಮುಖ್ಯಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ, ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್ ರುದ್ರಪ್ಪ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿದರ್ೇಶಕ ಪ್ರಮೋದ ಠಾಕ್ರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.