ಬಾಬುಜಿ ಸಾಮಾಜಿಕ ನ್ಯಾಯಕ್ಕೆ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದಾರೆ: ಜಿಲ್ಲಾಧಿಕಾರಿ
ಹಾವೇರಿ06: ಡಾ.ಬಾಬು ಜಗಜೀವನರಾಂ ಅವರ ಸಾಮಾಜಿಕ ನ್ಯಾಯದ ಬಗೆಗಿನ ಕಾರ್ಯಗಳು ಅನುಕರಣೀಯ. ಸಮಾಜದ ಒಳತಿಗಾಗಿ ಬದ್ಧತೆಯಿಂದ ಕೆಲಸಮಾಡಿದ್ದಾರೆ. ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಗಳನ್ನು ಲೋಕಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಚುನಾವಣೆಯ ನಂತರ ಈ ಮಹಾನ್ ನಾಯಕರ ಚಿಂತನೆಗಳನ್ನು ಹಾಗೂ ಸಾಮಾಜಿಕ ಕೊಡುಗೆಗಳ ಕುರಿತಂತೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಿಗಜೀವನರಾಂ ಅವರ 112ನೇ ಜನ್ಮ ದಿನಾಚರಣೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು. ಬಾಬುಜೀ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಚೈತ್ರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಬಾಬುಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 