100 ಡೆ ಕ್ಯಾಂಪಿಂಗ್ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

100 Day Camping Movement launched by District In-charge Minister


 100 ಡೆ ಕ್ಯಾಂಪಿಂಗ್  ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ 

ಕೊಪ್ಪಳ  08: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ "100 ಡೆ ಕ್ಯಾಂಪಿಂಗ್" ಆಂದೋಲನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಚಾಲನೆ ನೀಡಿದರು. 

100 ಡೆ ಕ್ಯಾಂಪಿಂಗ್ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಡಿಸೆಂಬರ್ 7 ರಿಂದ 2025ರ ಮಾರ್ಚ್‌ 23ರವರೆಗೆ ನಡೆಯಲಿದ್ದು, ಈ ಆಂದೋಲನದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. 

ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಗಂಗಾವತಿ ಶಾಸಕರಾದ ಜಿ.ಜನಾರ್ಧನ್ ರೆಡ್ಡಿ,  ಪ್ರಭಾರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಿಸಿದ್ದಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಲಿಂಗರಾಜು ಟಿ ಮತ್ತು ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.