10ನೇ ರಾಷ್ಟ್ರೀಯ ಯುನಾನಿ ದಿನಾಚರಣೆ
10th National Unani Day Celebration
ರಾಯಬಾಗ 02: ಯುನಾನಿ ವೈದ್ಯಕೀಯ ಪದ್ಧತಿ ಪ್ರಾಚೀನ ಮತ್ತು ವೈಜ್ಞಾನಿಕ ಚಿಕಿತ್ಸಾ ಪದ್ಧತಿಯಾಗಿದ್ದು, ಹಿಪೊಕ್ರಟೀಸ್ ಯುನಾನಿ ವೈದ್ಯಕೀಯದ ಪಿತಾಮಹ ಎಂದು ಕರೆಯುತ್ತಾರೆ ಎಂದು ಯುನಾನಿ ವೈದ್ಯ ಡಾ.ಇಬ್ರಾಹಿಂ ಹೇಳಿದರು.ಪಟ್ಟಣದ ಮಾಡರ್ನ್ ಐಟಿಐ ಕಾಲೇಜಿನಲ್ಲಿ ಇತ್ತೀಚೆಗೆ ಸರ್ಕಾರಿ ಯುನಾನಿ ಆಸ್ಪತ್ರೆ ಹಾಗೂ ರಾಷ್ಟ್ರೀಯ ಆಯುಷ್ ಅಭಿಯಾನದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಯುನಾನಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಯುನಾನಿ ಪದ್ದತಿಗೆ ವಿಶೇಷ ಸ್ಥಾನವಿದ್ದು, ಆಯುಷ್ ವ್ಯವಸ್ಥೆಯಡಿಯಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಗೊಳಿಸುವುದು ಅವಶ್ಯವಿದೆ ಎಂದರು. ಅಧ್ಯಕ್ಷತೆಯನ್ನು ಸರ್ಕಾರಿ ಆಯುಷ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಆರತಿ ಚಿಂಕೋಟಿ ವಹಿಸಿದ್ದರು.ಡಾ.ಆಸ್ಮಾ ಹಾಗೂ ಕಾಲೇಜಿನ ಪ್ರಾಚಾರ್ಯ ಮತ್ತು ವಿದ್ಯಾರ್ಥಿಗಳು ಇದ್ದರು.ಫೋಟೊ: 02 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಮಾಡರ್ನ್ ಐಟಿಐ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುನಾನಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈದ್ಯರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 