ಬಳ್ಳಾರಿಯಲ್ಲಿ ಸಂಭ್ರಮದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿಯ 118 ನೇ ಜಂಯತ್ಯೋತ್ಸವ

118th birth anniversary of former Deputy Prime Minister of India, pioneer of Green Revolution, cele

ಬಳ್ಳಾರಿಯಲ್ಲಿ ಸಂಭ್ರಮದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿಯ 118 ನೇ ಜಂಯತ್ಯೋತ್ಸವ 

ಬಳ್ಳಾರಿ 05: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನ ಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಮ್ 118 ನೇ ಜಯಂತಿ ಕಾರ್ಯಕ್ರಮವನ್ನು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕರಾದ ಡಾ. ಬಾಬುಜಗಜೀವನರಾಂ ಅವರು ಶೋಷಿತರ ಆಶಾಕಿರಣರಾಗಿದ್ದಾರೆ ಎಂದರು. 

ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬು ಜಗಜೀವನ್ ರಾಮ್ ಅವರ ಜನ್ಮ ವಾರ್ಷಿಕೋತ್ಸವವನ್ನು ಏಪ್ರಿಲ್ 5 ರಂದು ಪ್ರತಿವರ್ಷ ಆಚರಿಸುತ್ತೇವೆೆ. ಪರಿಶಿಷ್ಟ ಜಾತಿಗಳಂತಹ ತುಳಿತಕ್ಕೊಳಗಾದ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಗಮನಾರ್ಹ ಭಾರತೀಯ ಕಾರ್ಯಕರ್ತ ಮತ್ತು ರಾಜಕಾರಣಿಯಾಗಿದ್ದರು ಎಂದರು. 

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದ ಬೆನ್ನೆಲುಬು ರೈತ ಹಾಗೂ ಯೋಧ ಈ ಎರಡೂ ಸಮುದಾಯಕ್ಕೆ ಡಾ.ಬಾಬು ಜಗಜೀವನ ರಾಂ ಅವರ ಮಾರ್ಗದರ್ಶನ ಹಾಗೂ ನಾಯಕತ್ವ ಉಲ್ಲೇಖನಾರ್ಹವಾಗಿದೆ. ಅವರ ಸಾಮಾಜಿಕ ಕಳ-ಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಸಂಗನಕಲ್ಲಿನ ಲೇಖಕರು ಮತ್ತು ಚಿಂತಕರಾದ ಬಿ.ಶ್ರೀನಿವಾಸ ಮೂರ್ತಿ ಅವರು ಕಾರ್ಯಕ್ರಮದ ವಿಶೇಷ ಭಾಷಣಕಾರರಾಗಿ ಮಾತನಾಡಿ, ಡಾ.ಬಾಬು ಜಗಜೀವನ್ ರಾಮ್ ಅವರು 1908 ರ ಏ.05 ರಂದು ಬಿಹಾರ್‌ನ ಚಾಂದ್ವಾ ಗ್ರಾಮದಲ್ಲಿ ಜನಿಸಿದರು. ಇವರನ್ನು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು ಎಂದು ತಿಳಿಸಿದರು. 

1935 ರಲ್ಲಿ ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ​‍್ಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಮತ್ತು 1937 ರಲ್ಲಿ ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ  ಚಿಗುರು ಕಲಾತಂಡದಿಂದ ಡಾ.ಬಾಬು ಜಗಜೀವನ್ ರಾಮ್ ಕುರಿತ ಗೀತೆಗಳನ್ನು ಪ್ರಸ್ತುತ ಪಡಿಸಿದರು ಮತ್ತು ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ವೇದಿಕೆ ವತಿಯಿಂದ ಜಯಂತಿಯ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. 

ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಏರಿ​‍್ಡಸಿದ್ದ ಪ್ರಭಂದ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆರು ಫಲಾನುಭವಿಗಳಿಗೆ ಆಧುನಿಕ ಚರ್ಮಕಾರರ ಪಾದುಕೆ ಕುಟಿರಗಳನ್ನು ವಿತರಣೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನ್ ರಾಮ್ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಟಿ.ಪಂಪಾಪತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ.ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು. 

*ಸಂಭ್ರಮದ ಮೆರವಣಿಗೆ:* 

ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಅಂಗವಾಗಿ ಏರಿ​‍್ಡಸಿದ್ದ ಮೆರವಣಿಗೆಯು ವಿವಿಧ ಸಾಂಸ್ಕೃತಿ ಕಲಾ ತಂಡಗಳನ್ನೊಳಗೊಂಡು ನಗರದಲ್ಲಿ ಸಂಭ್ರಮದಿಂದ ನಡೆಯಿತು. 

ಮೆರವಣಿಗೆಗೆ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಮತ್ತು ಸಹಾಯಕ ಆಯುಕ್ತ ಪ್ರಮೋದ್ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. 

ಮೆರವಣಿಗೆಗೆ ಮುನ್ನ ನಗರದ ನಲ್ಲಚೇರುವು ಪ್ರದೇಶದ ಡಾ.ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಗಣ್ಯರು ಮಾಲಾರೆ​‍್ಣ ಮಾಡಿದರು. 

*ಆಕರ್ಷಕ ಸ್ತಬ್ಧಚಿತ್ರ:* 

ಮೆರವಣಿಗೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು. 

ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ  ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಹೆಚ್‌.ಆರ್‌.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.