ಅಂಕಲಿಯಲ್ಲಿ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸಂಸ್ಥೆಯ 11ನೇ ವಾರ್ಷಿಕೋತ್ಸವ
11th anniversary of Dr. Prabhakar Kore Credit Society in Ankali
ಲೋಕದರ್ಶನ ವರದಿ
ಚಿಕ್ಕೋಡಿ 29: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಪ್ರಧಾನ ಕಚೇರಿ ಹೊಂದಿರುವ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸಂಸ್ಥೆಯ ಹಾವೇರಿ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಚರಿಸಲಾಯಿತು.
ಶಾಖೆಯ ಅಧ್ಯಕ್ಷ ಬಸವರಾಜ ಎಸ್. ಮಾಸೂರ ಮಾತನಾಡಿ, 2015ರಲ್ಲಿ ಆರಂಭವಾದ ಶಾಖೆಯು 11 ವರ್ಷಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಮಾರ್ಚ್ 2026ರ ಅಂತ್ಯಕ್ಕೆ ರೂ47.97 ಕೋಟಿ ಠೇವಣಿ ಸಂಗ್ರಹಿಸಿದ್ದು, ರೂ9.38 ಕೋಟಿ ಸಾಲ ವಿತರಿಸಿದೆ. ಕಳೆದ ಸಾಲಿನಲ್ಲಿ ರೂ37.53 ಲಕ್ಷ ನಿವ್ವಳ ಲಾಭ ಗಳಿಸಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯಲ್ಲಿ ಜೀವ ವಿಮೆ, ವಾಹನ ವಿಮೆ ಸೇರಿದಂತೆ ವಿವಿಧ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಕಡಿಮೆ ಬಡ್ಡಿದರದಲ್ಲಿ ಚಿನ್ನದ ಸಾಲ ಸೌಲಭ್ಯವೂ ಲಭ್ಯವಿದೆ. ಗ್ರಾಹಕರು ಈ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಸಂಸ್ಥೆಯ ಸಂಸ್ಥಾಪಕ ಡಾ. ಪ್ರಭಾಕರ ಕೋರೆ ಅವರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಸಂಸ್ಥೆಯ ಎಲ್ಲ ಸದಸ್ಯರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಖೆಯ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಖೆಯ ಅಧ್ಯಕ್ಷ ಬಸವರಾಜ ಎಸ್. ಮಾಸೂರ, ನಿರ್ದೇಶಕರಾದ ಶಿವಯೋಗಿ ಎಂ. ಕೊಳ್ಳಿ, ನಿರಂಜನ್ ವಿ. ಹೇರೂರ, ವಿನಯ ಎಸ್. ಶಿರೂರ, ಸುಭಾಷಚಂದ್ರ ಎಂ. ಹುರಳಿಕೊಪ್ಪಿ, ದಯಾನಂದ ವಿ. ಯಡ್ರಾಮಿ, ಶಾಖಾ ವ್ಯವಸ್ಥಾಪಕ ಸುನೀಲ್ ಎಂ. ಚನ್ನೂರ ಹಾಗೂ ಸಿಬ್ಬಂದಿ, ಪಿಗ್ಮಿ ಸಂಗ್ರಾಹಕರು ಮತ್ತು ಗ್ರಾಹಕರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 