ಅಪ್ರತಿಮ ಕ್ರಾಂತಿಕಾರಿ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ 127ನೇ ವರ್ಷಾಚರಣೆ
ಬಳ್ಳಾರಿ 23: ಅಪ್ರತಿಮ ಕ್ರಾಂತಿಕಾರಿ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾದಾದಂತ್ಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ನಡುವೆ ಂಋಖಓ ನೇತೃತ್ವದಲ್ಲಿ ಕಾರ್ಯಕ್ರಮ ಮಾಡಲಾಯಿತು. ವಿದ್ಯಾರ್ಥಿಗಳಲ್ಲಿ ಉನ್ನತ ಸಂಸ್ಕೃತಿ, ನೀತಿ-ನೈತಿಕತೆಗಳನ್ನು ಮೇಲೆತ್ತುವ ಉದ್ದೇಶದೊಂದಿಗೆ ಜನವರಿ 23ರ ನೇತಾಜಿ ಸುಭಾಷ್ ಚಂದ್ರ ಬೋಸ್‌ರ 127ನೇ ಜನ್ಮ ವಾರ್ಷಿಕದ ಸಂದರ್ಭದಲ್ಲಿ ಜಿಲ್ಲಾ ವಿಮ್ಸ್ ಗ್ರೌಂಡ್ ಮತ್ತು ಮುನ್ಸಿಪಲ್ ಗ್ರೌಂಡ್, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಹಾಗೂ ಸಾರ್ವಜನಿಕರ ಮಧ್ಯೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರವನ್ನು ತಿಳಿಸಲಾಯಿತು.
“ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್. ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಸ್ವಾತಂತ್ರೋತ್ತರ ಭಾರತದಲ್ಲಿ ಇಂದಿಗೂ ಪ್ರತಿ ದಿನ 5000 ಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಅಸು ನೀಗುತ್ತಿದ್ದಾರೆ.
ಶೇ.60ಕ್ಕೂ ಹೆಚ್ಚು ಮಹಿಳೆಯರು ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ. ಪ್ರತಿದಿನವೂ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯಗಳು ನಡೆಯುತ್ತದೆ. ಸುಮಾರು ಅರ್ಧ ಮಿಲಿಯನ್ ಮಕ್ಕಳು ತಮ್ಮ 5ನೇ ವಯಸ್ಸಿನ ಹುಟ್ಟುಹಬ್ಬವನ್ನು ಕಾಣುವ ಮೊದಲೇ ಸಾವನ್ನಪ್ಪುತ್ತಿದ್ದಾರೆ. ಶಿಕ್ಷಣದ ವ್ಯಾಪಾರೀಕರಣ, ಶೇ.65 ರಷ್ಟು ಯುವಜನರು ಉನ್ನತ ಶಿಕ್ಷಣದಿಂದ ದೂರವುಳಿಯುವಂತೆ ಮಾಡಿದೆ. ಕೇವಲ ಶೇ.10ರಷ್ಟು ಭಾರತೀಯ ಶ್ರೀಮಂತರು ದೇಶದ ಒಟ್ಟಾರೆ ಶೇ.79ರಷ್ಟು ಸಂಪತ್ತಿನ ಮೇಲೆ ಒಡೆತನ ಸಾಧಿಸಿದ್ದಾರೆ. ಮಿಲಿಯಾಂತರ ರೈತರು ಕಳೆದ ಹಲವು ವರ್ಷಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು. ಶೇ.55ಕ್ಕೂ ಹೆಚ್ಚು ಜನ ರೈತರು ಹಸಿವಿನಲ್ಲಿ ಮಲಗುತ್ತಾರೆ.
ರೈತರಿಗೆ ಸಬ್ಸಿಡಿಗಳನ್ನು ನೀಡುವ ಬದಲಿಗೆ ಕೇಂದ್ರ ಸರ್ಕಾರ ಶ್ರೀಮಂತ ಕಾರ್ೋರೇಟ್ ಮನೆತನಗಳಿಗೆ ಬರೋಬ್ಬರಿ 13 ಲಕ್ಷ ಕೋಟಿಯಷ್ಟು ತೆರಿಗೆ ವಿನಾಯಿತಿ ನೀಡಿದೆ. ಇಂದಿನ ಆಳುವ ವರ್ಗದ ಅತಿ ಕ್ರೂರ ಅಕ್ರಮಣ ನಡೆಯುತ್ತಿರುವುದು ದೇಶದ ಯುವಜನತೆಯ ಆಲೋಚನಾ ಪ್ರಕ್ರಿಯೆಯ ಮೇಲೆ, ಜರ್ಮನಿಯಲ್ಲಿ ಹಿಟ್ಲರ್ ಮಾಡಿದಂತೆಯೇ ಇಂದು ಆಳುವ ಎಲ್ಲಾ ಸರ್ಕಾರಗಳು ಧರ್ಮಾಂಧತೆ, ಜಾತಿ ವೈಷಮ್ಯ ಹಾಗು ಅವೈಜ್ಞಾನಿಕ ಆಲೋಚನೆಗಳನ್ನು ಜನಗಳ ಮಧ್ಯೆ ಹರಿಬಿಡುತ್ತಿದ್ದಾರೆ. ಹಾಗಾಗಿ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕವಾಗಿದೆ.
ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ್ ಮಾತನಾಡಿದರು ಹಾಗೂ ಜಿಲ್ಲಾ ಉಪಾಧ್ಯಕ್ಷರ ಒಬ್ಬರಾದ ಶಾಂತಿ ಅವರು ಹಾಗೆ ಜಿಲ್ಲಾ ಕಚೇರಿ ಕಾರ್ಯದರ್ಶಿ ನಿಹರಿಕ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರುಸುದ್ದಿ ಇವರಿಂದಕಂಬಳಿ ಮಂಜುನಾಥ ಜಿಲ್ಲಾ ಕಾರ್ಯದರ್ಶಿಂಋಖಓ ಬಳ್ಳಾರಿ.