14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಪಡೆಯಿರಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್
14-year-old girls should get HPV vaccine without fail: ZP CEO Muhammad Haris Sumer
ಬಳ್ಳಾರಿ 10: ಜಿಲ್ಲೆಯಲ್ಲಿನ 14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, ಜಿಲ್ಲೆಯಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಹೆಚ್.ಪಿ.ವಿ(ಹೂಮನ್ ಪ್ಯಾಪಿಲೋಮ ವೈರಸ್)ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್ ಆಗಿ ಬದಲಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವುದನ್ನು ತಡೆಯಲು ಹೆಚ್.ಪಿ.ವಿ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಡಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್ಪಿವಿ ಲಸಿಕೆ ಸಹಕಾರಿಯಾಗಿದ್ದು, ಈ ಕುರಿತು ಸಮುದಾಯಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಈ ಲಸಿಕಾ ಅಭಿಯಾನ 90 ದಿನಗಳವರೆಗೆ ನಡೆಯಲಿದ್ದು, 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಲಸಿಕೆ ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ.99 ರಷ್ಟು ತಡೆಯಬಹುದು ಎಂದು ಹೇಳಿದರು.
ಲಸಿಕೆ ಪಡೆಯಲು ಬರುವ ಪಲಾನುಭವಿಗಳು ಖಡ್ಡಾಯವಾಗಿ ಪೋಷಕರನ್ನು ಜೊತೆಯಲ್ಲಿ ಕರೆದುಕೊಂಡು ಬರಬೇಕು. ಜೊತೆಗೆ ಸೂಕ್ತ ಗುರುತಿನ ಚೀಟಿ (ಜನನ ಪ್ರಮಾಣ ಪತ್ರ) ತೆಗೆದುಕೊಂಡು ಬರಬೇಕು. ಮುಖ್ಯವಾಗಿ ಊಟ ಸೇವನೆ ಮಾಡಿರಬೇಕು. ಕ್ಯಾನ್ಸರ್ ಮುಕ್ತ ನಾಳೆಗಾಗಿ ಲಸಿಕೆಯ ಸುರಕ್ಷೆ ಹೊಂದಬೇಕು ಎಂದು ತಿಳಿಸಿದರು. ಇದೇ ವೇಳೆ ಗಣ್ಯರು ಸಾಂಕೇತಿಕವಾಗಿ 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡಿದರು. ಬಳಿಕ ಲಸಿಕೆ ಪಡೆದ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಸಾತ್ವಿಕ್, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಂಸ್ಥೆಯ ವಿಜಯಲಕ್ಷ್ಮಿ, ನರ್ಸಿಂಗ್ ಅಧೀಕ್ಷಕಿ ವಿಮಲ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಮ್, ಶಾರದ ವಿದ್ಯಾಪೀಠ ಮುಖ್ಯಗುರುಗಳಾದ ಕವಿತ ವಾದಿರಾಜ, ಡಿಎನ್ಒ ಗೀರೀಶ್, ಮನೋಹರ್ ಸೇರಿದಂತೆ ನರ್ಸಿಂಗ್ ಅಧಿಕಾರಿಗಳು, ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 