ಗ್ರಾಮ ಸಡಕ್ ಯೋಜನೆಯಡಿ 150 ಕಿ.ಮೀ.ರಸ್ತೆ ಅಭಿವೃದ್ಧಿ

ಧಾರವಾಡ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಲಭ್ಯವಿರುವ ಅನುದಾನವನ್ನು ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯೊಂದಿಗೆ ಸೇರಿಸಿ ಅಗತ್ಯವಿರುವೆಡೆ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಪ್ರಸಕ್ತವರ್ಷದಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ 3 ರಡಿಯಲ್ಲಿ ಪ್ರತಿ ತಾಲ್ಲೂಕಿನ 30 ಕಿ.ಮೀ.ರಸ್ತೆ ಅಭಿವೃದ್ಧಿಗೆ ಅವಕಾಶವಿದೆ. ಧಾರವಾಡ ಜಿಲ್ಲೆಯಲ್ಲಿ ಈ ಯೋಜನೆಯಡಿ 150 ಕಿ.ಮೀ.ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಹೇಳಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ( ದಿಶಾ) ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ಗ್ರಾಮೀಣ ಕುಟುಂಬಗಳ ಜೀವನೋಪಾಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗಬೇಕು. ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 11 ಸಾವಿರ ವೈಯಕ್ತಿಕ ಶೌಚಾಲಯ ನಿಮರ್ಿಸಲಾಗಿದೆ. ಉಳಿದ 9 ಸಾವಿರ ಶೌಚಾಲಯಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಶೌಚಾಲಯ ಕಟ್ಟಿಕೊಂಡವರು ಅದನ್ನು ಬಳಸಲು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೆ ಹಲವಾರು ಅಡೆತಡೆಗಳಿರುವುದರಿಂದ ಸಾಧ್ಯವಾದಷ್ಟು ವೈಯಕ್ತಿಕ ಶೌಚಾಲಯಗಳ ನಿಮರ್ಾಣಕ್ಕೆ ಒತ್ತು ನೀಡಬೇಕು. ಘನತ್ಯಾಜ್ಯ ವಿಲೇವಾರಿ ಘಟಕಗಳ ನಿಮರ್ಾಣಕ್ಕೆ ಆದ್ಯತೆ ನೀಡಿ ಗ್ರಾಮೀಣ ನೈರ್ಮಲ್ಯ ಕಾರ್ಯ ಚುರುಕುಗೊಳಿಸಬೇಕು.ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಮಾಸಾಶನಗಳ ವಿತರಣೆಯಿಲ್ಲದೇ ಮಾನವ ಮಧ್ಯಸ್ಥಿಕೆ ಇಲ್ಲದೇ ನೇರವಾಗಿ ಅವರ ಖಾತೆಗೆ ಜಮೆಯಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಸಮರ್ಪಕ ನಿರ್ವಹಣೆಗೆ ಶಾಶ್ವತ ಪರಿಹಾರ ಹುಡುಕಿಕೊಳ್ಳಬೇಕು, ಪ್ರಾಯೋಗಿಕವಾಗಿ ಕೆಲವು ಪ್ರಯೋಗ ಮಾಡಬೇಕು ಎಂದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ ಮಾತನಾಡಿ, ಜಿಲ್ಲೆಯ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ ಬಗೆಗೆ ಅತೃಪ್ತಿ ವ್ಯಕ್ತಪಡಿಸಿದರು. ಸಕರ್ಾರಿ ಆಸ್ಪತ್ರೆಗಳಲ್ಲಿ ಔಷಧ ದಾಸ್ತಾನು ಸಮರ್ಪಕ ಬಳಕೆಯಾಗದೇ ವ್ಯರ್ಥವಾಗುತ್ತಿರುವುದು ಗಮನಕ್ಕೆ ಬಂದಿದೆ ಇದನ್ನು ತಡೆಯಬೇಕು ಎಂದರು. ಜಿಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ , ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಈ ಬಾರಿ 24,85,000 ಮಾನವ ದಿನಗಳ ಸೃಜನೆಗೆ ಗುರಿ ನಿಗದಿಪಡಿಸಲಾಗಿದೆ , ಕಾಮಗಾರಿಗಳು ಪ್ರಗತಿಯಲ್ಲಿವೆ, ಶೇಕಡಾ ನೂರರಷ್ಟು ಗುರಿ ಸಾಧಿಸಲಾಗುವುದು.ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆಗೆ 30 ಲಕ್ಷ ರೂ.ವಿಶೇಷ ಅನುದಾನ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.ಘಟಕಗಳ ಗುತ್ತಿಗೆ ಪಡೆದಿದ್ದ ಸಂಸ್ಥೆಗಳ ಗುತ್ತಿಗೆ ರದ್ದುಪಡಿಸಿ , ಅವುಗಳ ನಿರ್ವಹಣೆಗೆ ಹೊಸ ಪ್ಯಾಕೇಜ್ ಅಡಿ ನೂತನ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು. ಶಾಸಕ ಸಿ.ಎಂ.ನಿಂಬಣ್ಣವರ,ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಉಪಕಾರ್ಯದಶರ್ಿ ಎಸ್.ಜಿ.ಕೊರವರ್ ವೇದಿಕೆಯಲ್ಲಿದ್ದರು.