ಅರಣ್ಯ ಹಕ್ಕು ಕಾಯ್ದೆಯಡಿ ಈವರೆಗೆ 16,665 ಪ್ರಕರಣಗಳಲ್ಲಿ ಹಕ್ಕು ಪತ್ರ ವಿತರಣೆ: ಸಿದ್ದರಾಮಯ್ಯ
16,665 cases issued under Forest Rights Act: Siddaramaiah
ಅರಣ್ಯ ಹಕ್ಕು ಕಾಯ್ದೆಯಡಿ ಈವರೆಗೆ 16,665 ಪ್ರಕರಣಗಳಲ್ಲಿ ಹಕ್ಕು ಪತ್ರ ವಿತರಣೆ: ಸಿದ್ದರಾಮಯ್ಯ
ಸುವರ್ಣಸೌಧ 19: ಈವರೆಗೆ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕು ಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸದಸ್ಯರಾದ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು,
ಒಟ್ಟು 2,59,199 ಅರ್ಜಿಗಳು ತಿರಸ್ಕೃತವಾಗಿದ್ದು, 23,583 ಅರ್ಜಿಗಳು ಮಾತ್ರ ಬಾಕಿ ಇರುತ್ತವೆ. ರಾಜ್ಯದಲ್ಲಿ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಾನಾ ಕಾರಣಗಳಿಂದ ನಿಧಾನಗತಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಅರ್ಜಿದಾರರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಅರಣ್ಯ ಹಕ್ಕು ಸಮಿತಿಗಳ ಮುಂದೆ ಸಲ್ಲಿಸದಿರುವುದು. ಪರಿಶಿಷ್ಟ ಪಂಗಡಕ್ಕೆ ಸೇರಿರದ ಇತರೆ ಪಾರಂಪರಿಕ ಅರಣ್ಯವಾಸಿಗಳು 75 ವರ್ಷಗಳಿಂದ ಅರಣ್ಯ ಭೂಮಿ ಅವಲಂಬಿಸಿರುವ ಬಗ್ಗೆ ದಾಖಲೆ ಒದಗಿಸದೇ ಇರುವುದು. ರಾಷ್ಟ್ರೀಯ ಅಭಯಾರಣ್ಯ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗುವುದಕ್ಕೂ ಮೊದಲೇ ಅರಣ್ಯವಾಸಿಗಳು ಸ್ಥಳಾಂತರಗೊಂಡಿರುವುದರಿಂದ ಅರ್ಜಿಗಳು ತಿರಸ್ಕೃತವಾಗಿವೆ.
ಉಪವಿಭಾಗ ಸಮಿತಿ (ಖಆಐಅ) ಮತ್ತು ಜಿಲ್ಲಾ ಮಟ್ಟದ ಸಮಿತಿ (ಆಐಅ) ಗಳಲ್ಲಿ ನಾಮನಿರ್ದೇಶಿತ ತಾಲ್ಲೂಕು/ ಜಿಲ್ಲಾ ಪಂಚಾಯಿತಿ ಸದಸ್ಯರಿಲ್ಲದಿರುವ ಕಾರಣಗಳಿಂದ ಅರಣ್ಯ ಹಕ್ಕು ಪತ್ರ ನೀಡುವ ಪ್ರಕ್ರಿಯೆ ನಿಧಾನಗತಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ
ಯಾವುದೇ ಕೊರತೆಯಾಗಿಲ್ಲ: ಸಿದ್ದರಾಮಯ್ಯ
ಸುವರ್ಣಸೌಧ 19: ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿಯೇ ಸೂಕ್ತ ಅನುದಾನವನ್ನು ಕಲ್ಪಿಸಿರುತ್ತದೆ. ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಕ್ಷೇತ್ರಗಳಿಗೂ ಅಗತ್ಯ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಿರುತ್ತದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಕೊರತೆಯಾಗಿರುವುದಿಲ್ಲ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸದಸ್ಯರಾದ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲು ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಂಡಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಅಸ್ತಿತ್ವಕ್ಕೆ ಬಂದಾಗಿನಿಂದ 2024ರ ನವೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆಗೆ 32,817 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 8,931 ಕೋಟಿ ರೂ., ಗೃಹಜ್ಯೋತಿಗೆ 14,869 ಕೋಟಿ ರೂ., ಶಕ್ತಿ ಯೋಜನೆಗೆ 6,543 ಕೋಟಿ ರೂ., ಯುವನಿಧಿ ಯೋಜನೆಗೆ 221.3 ಕೋಟಿ ರೂ. ವೆಚ್ಚವಾಗಿದೆ.
ಜಿಲ್ಲಾಮಟ್ಟದಲ್ಲಿ 30 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಆದೇಶಿಸಲಾಗಿದೆ.ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಅವರ ಆಪ್ತ ಸಿಬ್ಬಂದಿ ಮತ್ತು ಪ್ರಾಧಿಕಾರದ ಸದಸ್ಯರುಗಳ ವೇತನ ಹಾಗೂ ಇತರೆ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ.
ಅದೇ ರೀತಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಗೌರವಧನ ಸಭಾ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಲಿಖಿತ ಉತ್ತರ ನೀಡಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 