ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

200 m around the examination centers. DC Prashant Kumar Mishra ordered to enforce the prohibition o

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ 18:ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜ.19 ಮತ್ತು 25 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿಬಂರ್ಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. 

ಜ.19 ರಂದು ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಜ.25 ರಂದು 11 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್‌, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. 

ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.