2025 ಮಾರ್ಚ-03 ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ

2025 from March-03 under the leadership of CITU, workers of various sections press for their demand

2025 ಮಾರ್ಚ-03 ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ 

ಹಾವೇರಿ 9: ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ 2025 ಮಾರ್ಚ-03 ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ಧಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಮಾರ್ಚ್‌-03 ಗ್ರಾಮ ಪಂಚಾಯತ ನೌಕರರು, ಮಾರ್ಚ-04 ಬಿಸಿಯೂಟ ನೌಕರರು, ಮಾರ್ಚ-05 ಕಟ್ಟಡ ಕಾರ್ಮಿಕರು, ಮಾರ್ಚ-06 ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ವಲಯದ ಅಸಂಘಟಿತ ಹಾಗೂ ಕಾರ್ಖಾನೆ ಕಾರ್ಮಿಕರು ಮಾರ್ಚಿ-07 ರಂದು ಅಂಗನವಾಡಿ ನೌಕರರು ಸಾವಿರಾರು ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಭಾಗವಹಿಸಲಿದ್ದು ಈ ಹೋರಾಟ ಕರ್ನಾಟಕದ ಶ್ರಮಜೀವಿಗಳ ಹೋರಾಟಗಳ ಪರ್ವವಾಗಲಿದೆ.ಗ್ರಾಮಪಂಚಾಯತ್ ನೌಕರರ ಸೇರಿ ಇತರೆ ಗುತ್ತಿಗೆ ಹೊರ ಗುತ್ತಿಗೆ ನೌಕರರ ನ್ಯಾಯಬದ್ದವಾಗಿ ಸಿಗಬೇಕಾದ ಕನಿಷ್ಟ ವೇತನ ಕಾರ್ಮಿಕ ಕಾನೂನುಗಳ ಜಾರಿ ವಿಷಯದಲ್ಲಿ ಅಗತ್ಯ ಕ್ರಮ ಮತ್ತು ಅನುದಾನ ನೀಡುತ್ತಿಲ್ಲ. ಈ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಅವುಗಳನ್ನು ಈಡೇರಿಸಲು ಸರಕಾರಗಳು ಮುಂದಾಗದಿರುವುದು ನೋವಿನ ಸಂಗತಿ. ಹಾಗಾಗಿ ಈ ಕೆಳಗಿನ ಬೇಡಿಕೆಗಳಿಗಾಗಿ ಅನಿರ್ದಿಷ್ಠ ಹೋರಾಟ ಹಮ್ಮಿಕೊಂಡಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದಾನೆಪ್ಪ ಕೆ ಹೆಬಸೂರು, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆ ಜಿಲ್ಲಾ ಮುಖಂಡರಾದ ರಾಜೇಶ್ವರಿ ಹಿರೇಮಠ,ಸಿದ್ದಮ್ಮ ಚೌಟಿ,ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ,ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಇದ್ದರು.