ಕೊಪ್ಪಳ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಜಿಲ್ಲಾಡಳಿತದಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಾರುತಿ ಅವರು ಹೇಳಿದರು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು (ಅ.11) ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷವೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ನೆರೆ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಯಾವುದೇ ರೀತಿಯ ಅದ್ಧೂರಿ ಆಚರಣೆ ಇಲ್ಲದೆ, ಅತ್ಯಂತ ಸರಳವಾಗಿ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿದೆ. ಸರಕಾರ ನೀಡುವ ಅನುದಾನದಲ್ಲಿ ಹಾಗೂ ಸಮುದಾಯದ ಸದಸ್ಯರು ನೀಡುವ ಹಣದಲ್ಲಿ ಆಚರಣೆಯ ನಂತರ ಉಳಿದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡಬೇಕೆಂಬ ಸಮುದಾಯದ ಮುಖಂಡರ ನಿರ್ಣಯಕ್ಕೆ ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದರು.
ಅಂದು ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರವರ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕೆಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಾದ ಸಿದ್ಧಲಿಂಗೇಶ ಕೆ. ರಂಗಣ್ಣವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದರ್ೇಶಕರಾದ ಎಲ್. ಜಿ. ರಾಟಿಮನಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಜಿಲ್ಲಾ ಕೋಶಾಧ್ಯಕ್ಷ ಶರಣಪ್ಪ ಹ್ಯಾಟಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.