28 ಜೋಡಿ ಉಚಿತ ಸಾಮೂಹಿಕ ವಿವಾಹ
28 couples get married for free
ಕಂಪ್ಲಿ 04: ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸತತ 12ನೇ ವರ್ಷದ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ನಂತರ ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ. ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
ಜಿಪಂ ಮಾಜಿ ಸದಸ್ಯ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ)ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಮಾತನಾಡಿ, ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ. ವಧು ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಇಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಸಾಮಾಜಿಕ ಕಳಕಳಿಯೊಂದಿಗೆ ನಡೆಸುವ ಸಾಮೂಹಿಕ ವಿವಾಹ ಮಹೋತ್ಸವ ನಿಜಕ್ಕೂ ಶ್ಲಾಘನೀಯ ಎಂದರು.ಮುಖಂಡ ಶಿವಶಂಕರಗೌಡ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಗ್ರಾಪಂ ಉಪಾಧ್ಯಕ್ಷ ಕಂಪ್ಲಿ ಕ್ಷೇತ್ರ ಎಸ್ಸಿ ಘಟಕದ ಅಧ್ಯಕ್ಷ ಆರ್.ಎಂ.ರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಲ್ಲಿನ ಉಚಿತ ಸಾಮೂಹಿಕ ವಿವಾಹದಲ್ಲಿ 28 ಜೋಡಿಗಳು ನವ ವಸಂತಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಜಗದೀಶಗೌಡ, ಕಮಲಾಪುರ ಸೋಮಶೇಖರ, ಕೊಟ್ಟಾಲ್ ವಿರೇಶ, ಹಾನಿ ಈರಣ್ಣ, ಕೆ.ಷಣ್ಮುಕಪ್ಪ, ವೀರಾಂಜೀನೀಯಲು, ಹೊಸಕೋಟೆ ಜಗದೀಶ, ಎ.ಸಿ.ದಾನಪ್ಪ, ಹೊನ್ನಳ್ಳಿ ಗಂಗಧಾರ, ಬಿ.ಸಿದ್ದಪ್ಪ, ಮೆಟ್ರಿ ಗೀರೀಶ್, ಬಳೆ ಮಲ್ಲಿಕಾರ್ಜುನ, ಜಾಫರ್ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 