ಕಳ್ಳತನವಾಗಿದ್ದ 3 ದ್ವಿಚಕ್ರವಾಹನಗಳು ಮಲಪ್ರಭಾ ನದಿಯಲ್ಲಿ ಪತ್ತೆ
3 stolen two-wheelers found in Malaprabha river
ಬೆಳಗಾವಿ 13: ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಹೊರ ವಲಯದಲ್ಲಿ ಹಾದು ಹೋಗುವ ಮಲಪ್ರಭಾ ನದಿಯಲ್ಲಿ ಮೂರು ದ್ವಿಚಕ್ರವಾಹನಗಳು ಪತ್ತೆ ಆಗಿವೆ. ಬೈಲಹೊಂಗಲ ತಾಲೂಕಿನ ನಯಾನಗರ ಬಳಿಯ ಮಲಪ್ರಭಾ ನದಿಯಲ್ಲಿ ನದಿ ನೀರಲ್ಲಿ ದಂಡೆ ಮೇಲೆ ಬೈಕ್ ಒಂದು ಕಾಣಿಸಿಕೊಂಡಿದ್ದು, ಯಾರೋ ಬೈಕ್ ಸಮೇತ ಸೇತುವೆ ಮೇಲಿಂದ ಬಿದ್ದಿರಬಹುದು ಎಂದು ನದಿಗಿಳಿದು ಹುಡುಕಾಟ ನಡೆಸಿದ್ದಾರೆ. ಅಲ್ಲಿ ಮತ್ತೊಂದು ಬೈಕ್ ಸಿಕ್ಕಿದೆ. ಇದನ್ನ ಕಂಡು ಶಾಕ್ ಆಗಿ ಮತ್ತೆ ಹುಡುಕಿದಾಗ ಸಿಕ್ಕಿದ್ದು ಮತ್ತೊಂದು ಬೈಕ್. ಹೀಗೆ ಮೂರು ಬೈಕ್‌ಗಳು ನದಿ ನೀರಿನಲ್ಲಿ ಸಿಗುತ್ತಿದ್ದಂತೆ ಸ್ಥಳೀಯರು ಕೂಡಲೇ ಬೈಲಹೊಂಗಲ ಠಾಣೆ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದು ಪರೀಶೀಲನೆ ನಡೆಸಿದ ಪೊಲೀಸರು ಬೈಕ್ ಹೊರ ತೆಗೆದು ಠಾಣೆಗೆ ತೆಗೆದುಕೊಂಡು ಹೋಗಿ ಅವುಗಳ ನಂಬರ್ ಆಧಾರದ ಮೇಲೆ ಮಾಲೀಕನ ಪತ್ತೆ ಹಚ್ಚಿ ಕೇಳಿದಾಗ ತಮ್ಮ ಬೈಕ್‌ಗಳು ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿರುವ ವಿಚಾರ ಗೊತ್ತಾಗಿದೆ.
ನದಿಯಲ್ಲಿ ಸಿಕ್ಕ ಬೈಕ್‌ಗಳು ಜಿಲ್ಲೆಯ ಸವದತ್ತಿ ಪಟ್ಟಣದಿಂದ ಒಂದೂವರೆ ತಿಂಗಳ ಹಿಂದೆ ಬೈಕ್ ಕಳ್ಳತನವಾಗಿದ್ದವು. ಬೈಕ್ ಕಳ್ಳತನವಾಗಿರುವ ಕುರಿತು ಠಾಣೆಯಲ್ಲಿ ಮಾಲೀಕರು ಕೇಸ್ ಕೂಡ ನೀಡಿದ್ದರು. ಈ ವಿಚಾರ ತಿಳಿದು ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದಾಗ ಗೊತ್ತಾಗಿದ್ದು, ಸಿಕ್ಕ ಬೈಕ್ ಬಳಕೆಯಾಗಿದ್ದು ಖದೀಮರಿಗೆ. ಡಿಸೆಂಬರ್ 22ರಂದು ಸವದತ್ತಿ ಪಟ್ಟಣದ ಅದೊಂದು ಚಿನ್ನದ ಅಂಗಡಿಯಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ಮಾಡುತ್ತೆ. 9 ಜನ ಮೂರು ಬೈಕ್ ಮೇಲೆ ಬಂದು ಚಿನ್ನದಂಗಡಿ ಬಾಗಿಲು ಮುರಿದು 12 ಲಕ್ಷ ರೂ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿರುತ್ತಾರೆ. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುತ್ತೆ. ಚಿನ್ನದಂಗಡಿ ಕಳ್ಳತನಕ್ಕೂ ಮೊದಲು ಮೂರು ಬೈಕ್ಗಳನ್ನ ಕದ್ದು ಕಳ್ಳರು ಬಳಿಕ ಚಿನ್ನದಂಗಡಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಹೀಗೆ ಕದ್ದು 25 ಕಿಮೀ ದೂರದಲ್ಲಿರುವ ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಎಸೆದು ಯಾರಿಗೂ ಗೊತ್ತಾಗದ ಹಾಗೆ ಪರಾರಿಯಾಗಿದ್ದರು.
ಕಳ್ಳತನವಾದ ಬೈಕ್‌ಗಳು ಕಳ್ಳತನಕ್ಕೆ ಬಳಕೆ ಮಾಡಿಕೊಂಡು ಬಳಿಕ ನದಿಗೆ ಎಸೆದಿದ್ದು ಒಂದೂವರೆ ತಿಂಗಳ ಬಳಿಕ ಬೈಕ್ ಪತ್ತೆಯಾಗಿವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆದಷ್ಟು ಬೇಗ ಕಳ್ಳರನ್ನು ಬಂಧಿಸುವುದಾಗಿ ಎಸ್ಪಿ ಕೆ. ರಾಮರಾಜನ್ ಹೇಳಿದ್ದಾರೆ. ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸರು ಕೂಡ ಖದೀಮರ ಹಿಡಿಯಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಖದೀಮರು ಪೊಲೀಸರ ದಿಕ್ಕು ತಪ್ಪಿಸಲು ಹೊಸ ಹೊಸ ಟೆಕ್ನಿಕ್ ಅಳವಡಿಸಿಕೊಂಡು ಕಳ್ಳತನ ಮಾಡುತ್ತಿರುವುದು ಪೊಲೀಸರಿಗೂ ಸವಾಲ್ ಆಗಿ ಪರಿಣಮಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 