ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ
ಬಾಗಲಕೋಟೆ 31: ಧಾರವಾಡದಲ್ಲಿ ಜರುಗಿದ ಸಹಕಾರ ಮಹಾಮಂಡಳದ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಕು. ಲಕ್ಷ್ಮೀ ಎನ್ ಪಾಟೀಲ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾಳೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕುರಿತು ಆಯೋಜಿಸಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಚರ್ಚಾ ಸ್ಪರ್ಧೆಯಲ್ಲಿ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಮಾತ್ರವೇ ಪರಿಣಾಮಕಾರಿ ಪಾತ್ರ ವಹಿಸಬಲ್ಲವು ಎಂಬ ವಿಷಯದ ಪರವಾಗಿ ಮಾತನಾಡಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದು ಸಾಧನೆ ತೋರಿದ ವಿದ್ಯಾರ್ಥಿನಿಗೆ ಬಿ.ವ್ಹಿ.ವ್ಹಿ.ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ ಎನ್. ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ, ಸಂಘದ ಆಡಳಿತ ಅಧಿಕಾರಿಗಳು, ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ, ಪಿಯುಸಿ ವಿಭಾಗ ಸಂಚಾಲಕರಾದ ಡಾ.ಆರ್.ಎಮ್ ಬೆಣ್ಣೂರ ಸೇರಿದಂತೆ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.