ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ
44th commemoration program of poet Dr. D.R. Bendre
ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೆಯ ಪುಣ್ಯಸ್ಮರಣೆ ಕಾರ್ಯಕ್ರಮ
ಧಾರವಾಡ 21: ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಧಾರವಾಡ ವತಿಯಿಂದ ದಿನಾಂಕ: 26.10.2025ರಂದು ಸಂಜೆ 5.00 ಗಂಟೆಗೆ ಡಾ.ದ.ರಾ.ಬೇಂದ್ರೆ ಭವನ, ಸಾಧನಕೇರಿ, ಧಾರವಾಡ ಇಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಏರಿ್ಡಸಲಾಗಿದೆ. ಹಿರಿಯ ಸಾಹಿತಿಗಳು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಧಾರವಾಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪಿ.ಶುಭ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ನಂತರ ಧಾರವಾಡದ ಗಾಯಕಿ ವಿದುಷಿ ರಾಧಾ ದೇಸಾಯಿ ಮತ್ತು ವೃಂದದವರು ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು ಹಾಗೂ ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 