ಶಿವಾಚಾರ್ಯರ 47ನೇ ಪುಣ್ಯಾರಾಧನೆ
ಸಿಂದಗಿ 10: ವರ್ಷದಿಂದ ವರ್ಷಕ್ಕೆ ಸನಾತನ ಧರ್ಮವನ್ನು ಮಠಮಾನ್ಯಗಳು ಉಳಿಸಿ ಬೆಳೆಸುತ್ತಿವೆ. ಮಠಗಳಲ್ಲಿ ಸಂಸ್ಕಾರ, ಸಂಸ್ಕೃತಿ ಇಂದಿನ ಯುವ ಪೀಳಿಗೆಗೆ ದೊರೆಯುತ್ತಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಲಿಂ. ರುದ್ರಮುನಿ ಶಿವಾಚಾರ್ಯರ 47ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಉಜ್ಜಯಿನಿ ಶ್ರೀಮದ್ ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಕಾರ್ಯಕ್ರಮದ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕಾಗಿರುವುದು ಅನಿವಾರ್ಯ. ನಾವೆಲ್ಲರೂ ಹೃದಯ ಶ್ರೀಮಂತಿಕೆ ಬೆಳೆಸಿಕೊಳ್ಳೋಣ. ಧರ್ಮವನ್ನು ಎಲ್ಲರೂ ಸೇರಿ ಉಳಿಸೋಣ ಎಂದರು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಯಶವಂತರಾಯಗೌಡ ರೂಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಆಫಜಪೂರ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಕಡದಾಳ ಶ್ರೀಗಳು, ಅಗರಖೇಡ ಶ್ರೀಗಳು, ಸೂರ್ಯಕಾಂತ ಶಾಸ್ತ್ರೀಗಳು ಚಿದಾನಂದ ಶಾಸ್ತ್ರೀಗಳ, ಸಂತೋಷ ಶಾಸ್ತ್ರೀಗಳ, ಶಂಭುಲಿಂಗ ಶಾಸ್ತ್ರೀಗಳು, ಶರಣಯ್ಯ ಶಾಸ್ತ್ರೀಗಳ, ಶಂಕರಯ್ಯ ಶಾಸ್ತ್ರೀಗಳು, ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಡಾ.ಅನಿಲ ನಾಯಕ, ನಿಂಗನಗೌಡ ಪಾಟೀಲ ಡಂಬಳ, ಆನಂದ ಚೌಧರಿ, ಶರಣಗೌಡ ಬಿರಾದಾರ, ಬಸವರಾಜ ಹೂಗಾರ, ಚಂದ್ರಶೇಖರ ಹೂಗಾರ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಸಂಗನಗೌಡ ಪಾಟೀಲ ಅಗಸಬಾಳ, ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಶಂಕರಗೌಡ ಬಿರಾದಾರ ಸೇರಿದಂತೆ ಶ್ರೀಮಠದ ಭಕ್ತರು, ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು.