4ನೇ ವಾರ್ಷಿಕ ಆರ್‌.ಡಿ.ಪಿ.ಆರ್‌. ಕ್ರೀಡಾಕೂಟ-2024 ಉದ್ಘಾಟನೆನಿರಂತರ ಕೆಲಸದ ಒತ್ತಡದ ನಡುವೆ ಆರೋಗ್ಯದ ಕಡೆಗೆ ಗಮನವಿರಲಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ

4th Annual RDPR Keep an eye on health amid the pressure of work leading up to the opening of the Ga

4ನೇ ವಾರ್ಷಿಕ ಆರ್‌.ಡಿ.ಪಿ.ಆರ್‌. ಕ್ರೀಡಾಕೂಟ-2024 ಉದ್ಘಾಟನೆನಿರಂತರ ಕೆಲಸದ ಒತ್ತಡದ ನಡುವೆ ಆರೋಗ್ಯದ ಕಡೆಗೆ ಗಮನವಿರಲಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ

ವಿಜಯಪುರ 24 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ನಿಮ್ಮೆಲ್ಲರಿಗೂ ಅವಕಾಶ ಸಿಕ್ಕಿದೆ. ಪ್ರತಿದಿನ ನಿರಂತರ ಕೆಲಸದ ಒತ್ತಡದಲ್ಲಿ ಆರೋಗ್ಯದ ಕಡೆಗೂ ಸಹ ಗಮನ ವಹಿಸಬೇಕು. ಇದಕ್ಕೆ ಪೂರಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ, ಸದೃಢರಾಗಬೇಕು. ನಮ್ಮ ದೇಹ ಸದೃಢ ಇದ್ದಾಗ ಮಾತ್ರ ಆರೋಗ್ಯ ಸ್ಥಿರವಾಗಿರಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತಿ ವಿಜಯಪುರ, ಆರ್‌.ಡಿ.ಪಿ.ಆರ್‌. ಇಲಾಖೆಯ ಎಲ್ಲ ವೃಂದ ಸಂಘಗಳ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಡಿಸೆಂಬರ್ 24, 25 ಮತ್ತು 26 ರಂದು ನಡೆಯಲಿರುವ 4ನೇ ವಾರ್ಷಿಕ ಕ್ರೀಡಾಕೂಟ-2024 ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸಾಕಷ್ಟು ಅನುಭವಗಳನ್ನು ಪಡೆದುಕೊಳ್ಳಬಹುದು. ದೇಹ ಮತ್ತು ಆರೋಗ್ಯವನ್ನು ಚೇತೋಹಾರಿಯಾಗಿರಿಸಲು ಕ್ರೀಡೆ ಸಹಕಾರಿ ಎಂದು ಹೇಳಿದರು. 

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಕ್ರೀಡೆಗಳಿಂದ ನಮ್ಮ ಆರೋಗ್ಯಕ್ಕೆ ತುಂಬಾ ಉಪಯುಕ್ತವಿದೆ. ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ. ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು ಎಂದು ಹೇಳಿದರು.ಜಿಲ್ಲೆಯ 13 ತಾಲೂಕುಗಳಿಂದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸುತ್ತಿರುವುದು ಬಹಳ ಹೆಮ್ಮೆಯ ವಿಷಯ. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾವು ಪ್ರತಿನಿತ್ಯ ನಮ್ಮ ನಮ್ಮ ಕೆಲಸಗಳಲ್ಲಿ ನಿರತರಾಗಿರುತ್ತೇವೆ. ಇದರ ಮಧ್ಯ ನಮ್ಮಲ್ಲಿ ವಿವಿಧ ಸಾಂಸ್ಕೃತಿಕ ಪ್ರತಿಭೆಗಳು ಹಾಗೂ ಆಟಗಳು ಇರುತ್ತವೆ. ಅವುಗಳನ್ನು ಹೊರಹಾಕಲು ಇಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಕ್ರೀಡಾಕೂಟದಲ್ಲಿ ಕೆಲವು ತಂಡಗಳಿಗೆ ಗೆಲುವು ಸಿಗುತ್ತದೆ ಮತ್ತು ಕೆಲವು ತಂಡಗಳಿಗೆ ಸೋಲು ಸಿಗುತ್ತದೆ. ಸೋಲು ಗೆಲುವುಗಳನ್ನು ನಾವು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯ್ಯಕ್ಷರಾದ ಸುರೇಶ ಶೇಡಶ್ಯಾಳ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಜಿ. ಪಾರೆ ರವರು ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಯೋಜನಾ ನಿರ್ದೇಶಕರಾದ ಬಿ. ಎಸ್‌. ರಾಠೋಡ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯಾ ಚಲವಾದಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ನಬಿಲಾಲ ಗಬಸಾವಳಗಿ, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಿ. ಎಸ್‌. ಕುಂಬಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ. ಬಿ. ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿಗಳಾದ ಅರುಣಕುಮಾರ ದಳವಾಯಿ, ಜಿಲ್ಲಾ ಮಟ್ಟದ ಅಕ್ಷರ ದಾಸೋಹ ಶಾಖೆಯ ಶಿಕ್ಷಣಾಧಿಕಾರಿಗಳಾದ ಎಸ್‌. ಜೆ. ನಾಯಕ, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆರ್‌.ಡಿ.ಪಿ.ಆರ್‌. ಇಲಾಖೆಯ ಎಲ್ಲ ವೃಂದ ಸಂಘಗಳ ಪದಾಧಿಕಾರಿಗಳು, ಜಿ.ಪಂ, ತಾ.ಪಂ, ಗ್ರಾಪಂ. ಗಳ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.