ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರ ಪ್ರಯಾಣ : ಸಿಹಿ ವಿತರಣೆ
500 crore passengers travel under Shakti Yojana: Sweets distributed
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರ ಪ್ರಯಾಣ : ಸಿಹಿ ವಿತರಣೆ
ಯರಗಟ್ಟಿ 14: ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಘನ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ವಾಕರಸಾಸಂ ಯರಗಟ್ಟಿ ವತಿಯಿಂದ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಗೋಪಾಲ ದಳವಾಯಿಯವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.ಈ ಸಮಾರಂಭದಲ್ಲಿ ಮಾತನಾಡಿದ ಗೋಪಾಲ ದಳವಾಯಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೂಲಕ ಬಡ ಜನರಿಗೆ ನಮ್ಮ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ, ಅದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯು ಹೆಚ್ಚು ಜನರಿಗೆ ಮುಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇಲ್ಲಿಯವರೆಗೆ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ ಅನುದಾನದ ವಿವರವನ್ನು ಅಂಕಿ ಸಂಖ್ಯೆ ಸಮೇತ ಸಾರ್ವಜನಿಕರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಎಂ ವ್ಹಿ ಗುಂಡಪ್ಪಗೋಳ, ಸಾರಿಗೆ ನಿಯಂತ್ರಕರಾದ ಉಮೇಶ ಶಿಂತ್ರಿ, ಕೆ. ಕೆ. ಬಡಿಗೇರ, ಎಚ್. ಸಿ. ಮಾರುತಿ, ಎಲ್. ಆಯ್. ಹಕಾಟಿ, ಡಿ. ಎಚ್. ಕಿತ್ತೂರ, ಪ. ಪಂ. ಸದಸ್ಯರಾದ ನಿಖಿಲ ಪಾಟೀಲ, ಕಾಂಗ್ರೆಸ್ ಮುಖಂಡರಾದ ಎಪಿಎಂಸಿ ಅಧ್ಯಕ್ಷರ ನೀಲಕಂಠ ಸಿದ್ದಬಸವರ, ಶಿವಾನಂದ ಕರಿಗೊಣ್ಣವರ, ಮಂಜುನಾಥ ತಡಸಲೂರ, ಭಾಸ್ಕರ ಹಿರೇಮೈತ್ರಿ, ಹನುಮಂತ ರಂಗಾಪೂರ, ವಿಠ್ಠಲ ತೋರಣಗಟ್ಟಿ, ಕಾಶೀಮಸಾಬ ಜಮಾದಾರ, ರಫೀಕ ಡಿ ಕೆ, ಫಾರುಕ್ ಅತ್ತಾರ, ಬಸವರಾಜ ಪೂಜೇರ, ಯರಗಟ್ಟಿ-ಮುನವಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾನೂರಬಿ ದಿಲಾವರನಾಯ್ಕ, ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು, ಸಾರಿಗೆ ಸಿಬ್ಬಂದಿ ಹಾಗೂ ಪ್ರಯಾಣಿಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 