57 ನೇ ವಾರ್ಷಿಕಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭ
57th Annual Sports and Cultural Day Celebration and Prize Distribution Ceremony
57 ನೇ ವಾರ್ಷಿಕಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭ
ಕಾಗವಾಡ 15: ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದರಿಂದ ಸಧೃಡವಾದ ದೇಹದಲ್ಲಿ ಸಧೃಡವಾದ ಮನಸ್ಸನ್ನು ಹೊಂದುತ್ತಾರೆ ಹಾಗೂ ಓದುವುದರ ಕಡೆಗೆ ಗಮನ ಹರಿಸಬೇಕೆಂದು ಹಾರೂಗೇರಿ ಎಸ್‌ವ್ಹಿಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಡಾ. ಚಂದ್ರಶೇಖರ ಗುಡಸಿ ಹೇಳಿದರು.
ಅವರು, ಮಂಗಳವಾರ ದಿ. 14 ರಂದು ಹಮ್ಮಿಕೊಂಡ ವಾರ್ಷೀಕ ಕ್ರೀಡಾ ಹಾಗೂ ಸಾಂಸ್ಕೃತಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ, ಮಾತನಾಡುತ್ತಿದ್ದರು.
ಕಾಗವಾಡ ಗುರುದೇವಾಶ್ರಮದ ಪ.ಪೂ ಯತೀಶ್ವರಾನಂದ ಸ್ವಾಮೀಜಿ, ಹಂಚಿನಾಳ ಭಕ್ತಿಯೋಗಾಶ್ರಮದ ಪಪೂ ಮಹೇಶಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸ್ವಾಗತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎ.ಪಾಟೀಲ, ಆಡಳಿತಾಧಿಕಾರಿ ವ್ಹಿ.ಎಸ್. ತುಗಶೆಟ್ಟಿ, ಪ.ಪೂ. ವಿಜ್ಞಾನ ವಿಭಾಗದ ಆಡಳಿತಾಧಿಕಾರಿ ಎಂ. ವ್ಹಿ. ಮಲಕಣ್ಣವರ ಉಪಸ್ಥಿತರಿದ್ದರು. ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಬಿ. ನಂದಾಳೆ ವಾರ್ಷಿಕ ವರದಿ ಓದಿದರು. ಪ್ರಾಚಾರ್ಯ ಡಾ. ಎಸ್.ಎ. ಕರ್ಕಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅತಿಥಿಗಳು ವಿದ್ಯಾರ್ಥಿಗಳಿಗೆ ಕ್ರೀಡಾ, ಸಾಂಸ್ಕೃತಿಕ, ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನಗಳನ್ನು ವಿತರಿಸಿದರು. ದೈಹಿಕ ನಿರ್ದೇಶಕ ಅಮರ ಕೋರವಿ ಕ್ರೀಡಾ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಸುವರ್ಣ ಪದಕ ಪಡೆದ ವಿದ್ಯಾರ್ಥಿಗಳಾದ ಅಮಿತ ಖಿಚಡೆ, ಪೂಜಾ ಬಜಂತ್ರಿ, ಐಶ್ವರ್ಯಾ ಕೇರೂರೆ, ಯಲ್ಲಕ್ಕಾ ಬಜಂತ್ರಿ ಇವರಿಗೆ ಸುವರ್ಣ ಪದಕ ಹಾಗೂ ಪ್ರಮಾಣ ಪತ್ರಗಳನ್ನು ಕೊಟ್ಟು ಗೌರವಿಸಲಾಯಿತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 