6 ಉರ್ದು ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ : ಶ್ರೀನಿವಾಸ ಮಾನೆ
6 Urdu schools upgraded to Maulana Azad Public Schools: Srinivas Mane
ಹಾನಗಲ್: ರಾಜ್ಯದಲ್ಲಿ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಮೂಲಸೌಕರ್ಯ ಒದಗಿಸಿ ಕಲಿಕಾ ಗುಣಮಟ್ಟ ಹೆಚ್ಚಿಸಲು ಸರ್ಕಾರ ಮುಂದಾಗಿದ್ದು ತಾಲೂಕಿನ 6 ಉರ್ದು ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಭಾನುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಬೆಳಗಾಲಪೇಟೆ ಗ್ರಾಮದ ಆರ್.ಎಂ.ಎಸ್.ಎ. ಉನ್ನತೀಕರಿಸಿದ ಉರ್ದು ಪ್ರೌಢಶಾಲೆ, ಅಕ್ಕಿಆಲೂರಿನ ಸರ್ಕಾರಿ ಉರ್ದು ಪ್ರೌಢಶಾಲೆ, ಹಾನಗಲ್ಲಿನ ದರ್ಗಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕಂಚಿನೆಗಳೂರಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಅಕ್ಕಿಆಲೂರಿನ ಪಿಎಂಶ್ರೀ ಸರ್ಕಾರಿ ಉರ್ದು ಹೆಣ್ಣುಮಕ್ಕಳ ಶಾಲೆ ಹಾಗೂ ಹಾನಗಲ್ಲಿನ ಸುರಳೇಶ್ವರ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದು ಶಾಸಕ ಮಾನೆ ವಿವರಿಸಿದ್ದಾರೆ.
ಈ 6 ಶಾಲೆಗಳಲ್ಲಿ ಕೊಠಡಿ, ಶೌಚಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇತರ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮೊದಲ ಹಂತದಲ್ಲಿ ತಲಾ ಒಂದು ಕೋಟಿ ರೂ. ಅನುದಾನ ಸಹ ದೊರಕಲಿದೆ ಎಂದು ತಿಳಿಸಿರುವ ಮಾನೆ, ಇತ್ತೀಚಿಗೆ ಸರ್ಕಾರ ತಾಲೂಕಿನ ಬೆಳಗಾಲಪೇಟೆ, ಚಿಕ್ಕಾಂಶಿ ಹೊಸೂರು ಮತ್ತು ಬಮ್ಮನಹಳ್ಳಿ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಿದೆ. ಹಾನಗಲ್, ಅಕ್ಕಿಆಲೂರು ಮತ್ತು ಮಂತಗಿ ಗ್ರಾಮಗಳಲ್ಲಿ ಹೊಸದಾಗಿ ಸರ್ಕಾರಿ ಪ್ರೌಢಶಾಲೆಗಳನ್ನು ಮಂಜೂರಿ ಮಾಡಿದೆ. 7 ಶಾಲೆಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ. ಮತ್ತು 27 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಮಹತ್ತರ ಕೊಡುಗೆ ನೀಡಿದೆ. ತಾಲೂಕಿನ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 