ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ
69th death anniversary of BR Ambedkar
ಕಂಪ್ಲಿ 06: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಮಹಾ ಮಾನವತವಾದಿ ಸವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಶನಿವಾರ ಆಚರಿಸಲಾಯಿತು ಈವೇಳೆ ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು ಈಸಂದರ್ಭದಲ್ಲಿ ಸಂಘಟನೆ ಮುಖಂಡ ಕೆ.ಲಕ್ಷ್ಮಣ ಮಾತನಾಡಿ ಡಾ ಬಿ.ಆರ್.ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಖಚಿತಪಡಿಸುವ ಉದ್ದೇಶದಿಂದ ಸಂವಿಧಾನ ನಿರ್ಮಿಸಿದರು ಒಂದೇ ಜಾತಿಗೆ ಸೀಮಿತವಾಗದೆ ಇಡಿ ಮಾನವ ಕುಲಕ್ಕೆ ಅವರು ಹಾಕಿಕೊಟ್ಟ ಮಾರ್ಗದರ್ಶನ ಮಾದರಿಯಾಗಿದೆ ಅಂಬೇಡ್ಕರ್ ರಾಜೀಕೀಯ ಮತ್ತು ಸಮಾಜ ಸುಧಾರಕರು ಮಹಿಳಾ ಪರ ಹೋರಾಟಗಾರರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಅಪಾರವಾದ ಕೊಡುಗೆ ನೀಡಿದ್ದಾರೆ ಪ್ರತಿಯೊಬ್ಬರು ಅವರ ಅದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು ಮುಖಂಡರಾದ ಬುಜ್ಜಿಕುಮಾರ ಬಿ.ಸಿದ್ದಪ ವಿರುಪಾಕ್ಷಿ ಸಣಾಪುರ ಮರಿಸ್ವಾಮಿ ಸುಧಕರ ವಸಂತಕಹಳೆ ಭೀಮ ಆರ್ಮಿ.ಯಲ್ಲಪ್ಪ ಮುನಿಸ್ವಾಮಿ ಬಸವರಾಜ ರವಿ ಧನುಷ ರಾಮಣ್ಣ ರಾಜಭಕ್ಷಿ ನಬೀ ರಾಮಸಾಗರ ಬಸವರಾಜ ಸೇರಿ ಅನೇಕರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 