7 ಭೂಹೀನ ಬಡ ರೈತರಿಗೆ ಸಾಗುವಳಿ ಪತ್ರ ನೀಡಿದ : ಶಾಸಕ ಪಠಾಣ
7 Landless poor farmers given cultivation certificates: MLA Pathan
ಲೋಕದರ್ಶನ ವರದಿ
ಶಿಗ್ಗಾವಿ 01: ಸರ್ಕಾರದ ಜಮೀನನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರು ಆನ್ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿದ ಒಟ್ಟು 17 ಫಲಾನುಭವಿಗಳಲ್ಲಿ 7 ಭೂಹೀನ ಬಡ ರೈತರಿಗೆ ಸಾಗುವಳಿ ಪತ್ರ ನೀಡಲು ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ ತಹಶಿಲ್ದಾರಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಬಗರ್ ಹುಕುಂ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ 7 ಪ್ರಕರಣಗಳನ್ನು ಇತ್ಯರ್ಥಗೋಳಿಸಿ ಬಾಕಿ ಉಳಿದ 10 ಪ್ರಕರಣದ ಸಂಬಂಧ ಪಟ್ಟ ದಾಖಲೆ ಪರೀಶೀಲನೆ ನಡೆಸಲು ತಹಶೀಲ್ದಾರ್ ಅವರಿಗೆ ತಿಳಿಸಿದರು. ತಾಲೂಕಿನಲ್ಲಿ ಬಹಳಷ್ಟು ಪ್ರಕರಣಗಳು ತಹಶೀಲ್ದಾರ ಕಛೇರಿಗೆ ಆಫ್ಲೈನ್ ಮೂಲಕ ಸಲ್ಲಿಸಿದ ಬಡ ರೈತರ ಅರ್ಜಿಯ ಫಲಾನುಭವಿಗಳಿಗೆ,ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಹಶೀಲ್ದಾರ್ ಅವರ ಕಛೇರಿ ಮೂಲಕ ಮಾಹಿತಿ ಒದಗಿಸಲು ಹೇಳಿದರು. ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 