ಇಂಡಿ ತಾಲ್ಲೂಕಿನಾದ್ಯಂತ 76ನೇ ಗಣರಾಜ್ಯೋತ್ಸವದ ಸಂಭ್ರಮ
ಇಂಡಿ 26: ತಾಲೂಕಿನಾದ್ಯಂತ 76 ನೇ ಗಣರಾಜ್ಯೋತ್ಸವದ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಂಡಿ ನಗರದ ಕ್ರೀಡಾಂಗಣದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ಪೋಲಿಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದರು.ನಂತರ ಮಾತನಾಡಿದ ಅವರು ಸ್ವಾತಂತ್ರ್ಯ, ಸಮಾನತೆ, ಏಕತೆ, ಭ್ರಾತೃತ್ವ, ಸಹೋದರತ್ವ, ನಮ್ಮ ಸಂವಿಧಾನದಲ್ಲಿ ಇರುವ ಪ್ರಮುಖ ಮೌಲ್ಯಗಳಾಗಿವೆ. ಇಂತಹ ಮೌಲ್ಯಗಳನ್ನು ನೀಡಿದ ಸಂವಿಧಾನ ಜಾರಿಗೆ ಬಂದ ದಿನದ ಈ ರಾಷ್ಟ್ರೀಯ ಹಬ್ಬವು ದೇಶದ ಏಕತೆ ಮತ್ತು ಹೆಮ್ಮೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.ಅದರಂತೆ ಇಂಡಿ ನಗರದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಧ್ವಜಾರೋಹಣ ನೆರವೇರಿಸಿದರು.ಇಂಡಿ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ರಾಠೋಡ ಅವರು ಧ್ವಜಾರೋಹಣ ನೆರವೇರಿಸಿದರು. ಹಾಗೂ ಇಂಡಿ ತಾಲ್ಲೂಕಿನ ಹೋರ್ತಿಯ ಮಲ್ಲಿಕಾರ್ಜುನ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮುಖ್ಯ ಗುರುಗಳಾದ ಬಿ ಬಿ ಗಡ್ಡದ ಅವರು ಧ್ವಜಾರೋಹಣ ನೆರವೇರಿಸಿದರು.
ತಡವಲಗಾ ಗ್ರಾಮದ ರಾಚೋಟೇಶ್ವರ ಶಾಲೆಯಲ್ಲಿ ಸಂಸ್ಥೆಯ ನಿರ್ದೇಶಕ ಅಶೋಕ ಮಿರ್ಜಿ ಅವರು ಧ್ವಜಾರೋಹಣ ನೆರವೇರಿಸಿದರು. ತಡವಲಗಾ ಗ್ರಾಮ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷ ಸುನಂದಾ ವಾಲಿಕಾರ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ತಡವಲಗಾ ಗ್ರಾಮ ಪಂಚಾಯಿತಿ ವತಿಯಿಂದ ಕೊಡಪಡುವ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ತಡವಲಗಾ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮದ ಹಿರಿಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.