ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ 8 ಸಾವಿರ ಪ್ರಕರಣ ಇತ್ಯರ್ಥ, 3 ಸಾವಿರ ಬಾಕಿ: ಅಧ್ಯಕ್ಷ ಟಿ.ಶ್ಯಾಮ್ ಭಟ್
8,000 cases settled by State Human Rights Commission, 3,000 pending: Chairman T. Shyam Bhatt
ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ 8 ಸಾವಿರ ಪ್ರಕರಣ ಇತ್ಯರ್ಥ, 3 ಸಾವಿರ ಬಾಕಿ: ಅಧ್ಯಕ್ಷ ಟಿ.ಶ್ಯಾಮ್ ಭಟ್
ಬಳ್ಳಾರಿ 10: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ತಾವು ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ, ಆಯೋಗದಲ್ಲಿ ಬಾಕಿ ಉಳಿದಿದ್ದ ಹಾಗೂ ಹೊಸದಾಗಿ ಸಲ್ಲಿಕೆಯಾದ ಪ್ರಕರಣಗಳೂ ಸೇರಿದಂತೆ ಒಟ್ಟು 11,200 ಪ್ರಕರಣಗಳ ಪೈಕಿ ಕಳೆದ 2024ರ ಡಿಸೆಂಬರ್ ಅಂತ್ಯವರೆಗೆ 8,061 ಪ್ರಕರಣಗಳನ್ನು ವಿಲೇ ಮಾಡಲಾಗಿದ್ದು, 3,139 ಪ್ರಕರಣಗಳು ವಿವಿಧ ಹಂತದಲ್ಲಿ ಬಾಕಿ ಇವೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಅವರು ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರಿ್ಡಸಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ತಾವು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಆಯೋಗವೇ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಈಗಾಗಲೆ 16 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ದೂರುಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕವೂ ಸಲ್ಲಿಸಬಹುದಾಗಿದೆ. ದೂರುದಾರರು ಇಲ್ಲದಿದ್ದರೂ ಅವರ ಪರವಾಗಿ ಬೇರೆ ಯಾರಾದರೂ ದೂರು ನೀಡಬಹುದು ಎಂದು ಅವರು ತಿಳಿಸಿದರು.
*ಜಿಲ್ಲೆಯಲ್ಲಿ 20 ಪ್ರಕರಣ ಇತ್ಯರ್ಥ, 7 ಪ್ರಕರಣ ಬಾಕಿ:*
ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಕೆಯಾಗಿದ್ದ ಒಟ್ಟು 27 ಪ್ರಕರಣಗಳಲ್ಲಿ 20 ಪ್ರಕರಣ ಇತ್ಯರ್ಥ ಪಡಿಸಲಾಗಿದ್ದು, 07 ಪ್ರಕರಣ ಬಾಕಿ ಇವೆ ಎಂದು ಅಧ್ಯಕ್ಷರು ತಿಳಿಸಿದರು.
ಇದಕ್ಕೂ ಮುನ್ನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು, ಜಿಲ್ಲಾ ಮಟ್ಟದಲ್ಲಿ ಪ್ರಕರಣಗಳ ವಿಚಾರಣೆ ದೂರು ಸ್ವೀಕಾರ ಮಾಡುವುದರಿಂದ ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ ಎಂದು ಹೇಳಿದರು.
ಆಯೋಗದ ನ್ಯಾಯಾಂಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಮಾತನಾಡಿ ಆಯೋಗದಿಂದ ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ ಎಂದು ಹೇಳಿದರು.
ಮಾನವ ಹಕ್ಕುಗಳ ಆಯೋಗದ ಹೆಸರು ಹೇಳಿಕೊಂಡು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬೆದರಿಕೆ ಒಡ್ಡುವುದು, ಹಣ ವಸೂಲಿ ಮಾಡಲು ಪ್ರಯತ್ನಿಸುವುದು ಕಂಡುಬಂದಲ್ಲಿ ಆಯೋಗಕ್ಕೆ ತಿಳಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಆಯೋಗದ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್ ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 