ಗಂಗಾಧರ ರಾಜಯೋಗೀಂದ್ರ ಮಹಾಸ್ವಾಮಿಗಳವರ 98ನೇ ಜನ್ಮದಿನೋತ್ಸವ
98th Birth Anniversary of Gangadhar Rajayogindra Mahaswami
ಹುಬ್ಬಳ್ಳಿ 12: ಜಗದ್ಗುರು ಮೂರುಸಾವಿರಮಠ ಮಹಾಸಂಸ್ಥಾನದ ಮಠಾಧೀಶರಾಗಿದ್ದ ಮನ್ಮಹಾರಾಜ ನಿರಂಜನ ಜಗದ್ಗುರು ಡಾ. ಗಂಗಾಧರ ರಾಜಯೋಗೀಂದ್ರ ಮಹಾಸ್ವಾಮಿಗಳವರ 98ನೇ ಜನ್ಮದಿನೋತ್ಸವ ನಿಮಿತ್ತ ಪೂಜ್ಯ ಡಾ. ಗಂಗಾಧರ ಸ್ವಾಮಿಗಳವರ ಗದ್ದಿಗೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ, ಪೂಜೆ ಸಲ್ಲಿಸಿ ಗೌರವ ಪೂರ್ವಕವಾಗಿ ಶ್ರದ್ಧಾ ಭಕ್ತಿಯಿಂದ ನಮನಗಳನ್ನು ಸಲ್ಲಿಸಲಾಯಿತು. ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ಮೂರುಸಾವಿರಮಠ ಪೂಜಾ ಸಮಿತಿಯ ಮುಖ್ಯಸ್ಥರಾದ ಚನ್ನಬಸಪ್ಪ ಧಾರವಾಡಶೆಟ್ಟರ್, ಸಾಹಿತಿ, ನುಡಿ ಕನ್ನಡ ಬಳಗದ, ಹಿರಿಯರಾದ ವೀರಣ್ಣ ಹೂಲಿ, ಮಠದ ಅರ್ಚಕ ಶಶಿಧರ ಹಿರೇಮಠ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 