ಎ.ಬಿ.ಸಾಲಕ್ಕಿ ಕಾಲೇಜ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಎ.ಬಿ.ಸಾಲಕ್ಕಿ ಕಾಲೇಜ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ  A.B. Salakki College students selected for state level

ಎ.ಬಿ.ಸಾಲಕ್ಕಿ ಕಾಲೇಜ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ  

ದೇವರಹಿಪ್ಪರಗಿ 21: ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಇವರ ವತಿಯಿಂದ ನಡೆದು ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಂಟಿಕ್ ಕ್ರೀಡಾಕೂಟದಲ್ಲಿ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿಜಯಪುರ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರದಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಂಟಿಕ್ ಕ್ರೀಡಾಕೂಟದಲ್ಲಿ ಬಾಲಕರ ಗುಂಡು ಎಸೆತದಲ್ಲಿ  ಕು. ಶಿವಗಿರಿ ಉಪ್ಪಾರ ಪ್ರಥಮ ಸ್ಥಾನ, ಮಹೇಶ ಡಾಳಿ ಕ್ರಾಸ್ ಕಂಟ್ರಿಯಲ್ಲಿ 2ನೇ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಕು. ಸೌಂದರ್ಯ ಢವಳಗಿ ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ, ಬಾಲಕಿಯರ 400+100ಮೀ ರೀಲೆಯಲ್ಲಿ ಪ್ರಥಮ ಹಾಗೂ 400+400ಮೀ ರೀಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಒಟ್ಟು 07ಜನ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.  

ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಉಪನ್ಯಾಸಕ ಕೆ.ವ್ಹಿ. ಒಡೆಯರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದು ಸಂತಸ ತಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್‌.ಡಿ.ಇ ರಸ್ತೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಾವಿದ್ಯಾಲಯದ ಉಪನ್ಯಾಸಕರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆಗಳು ಸಲ್ಲಿಸಿದ್ದಾರೆ.