ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜ್ಯೋತಿ ಅಂಗಡಿ
ಹುಬ್ಬಳ್ಳಿ 09: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಸಾಂಸ್ಕೃತಿಕ ಚಟುವಟಿಕೆಯನ್ನು ದಿನಾಂಕ 8.01.2025 ರಂದು ತುಮಕೂರಿನಲ್ಲಿ ಆಯೋಜಿಸಲಾಗಿತ್ತು ಧಾರವಾಡ ಜಿಲ್ಲೆಯ ಶ್ರೀಮತಿ ಕಮಲಮ್ಮ ಕೋಂ ತಿರುಕಪ್ಪ ಮಂಟೂರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಜ್ಯೋತಿ ಅಂಗಡಿ ಜಾನಪದ ಹಾಡು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಕುಮಾರಿ ಜ್ಯೋತಿ ಅಂಗಡಿ ಅವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಪಿ.ಸುರೇಶ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಿ. ಹನುಮಂತಪ್ಪ ಮತ್ತು ಸಿಬ್ಬಂದಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಭಾಷ್ ಮಂಟೂರ್ ಹಾಗೂ ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು ಶುಭ ಹಾರೈಸಿದ್ದಾರೆ.