ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಉದ್ಘಾಟನೆ
A New Revolution in the Education Sector: English-Medium Primary School Inaugurated
ತಾಳಿಕೋಟೆ 02: ತಾಲೂಕಿನ ಬಿಳೆಭಾವಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ. ಇತ್ತೀಚೆಗೆ 5ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಹಲವಾರು ಶಾಲೆಗಳನ್ನು ಆರಂಭಿಸಲಾಗಿದ್ದು, ಈ ಯೋಜನೆಯ ಪ್ರಯೋಜನವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆಯಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷೇತ್ರ ಸಮನ್ವಯಾಧಿಕಾರಿ ಅರ್ಬಿ ದಮ್ಮೂರಮಠ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಆಂಗ್ಲ ಮಾಧ್ಯಮ ಬೋಧನೆಗೆ ಅಗತ್ಯ ತರಬೇತಿಯನ್ನು ಶಿಕ್ಷಕರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರದ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಲಕ್ಷ್ಮೀ ವಿಜಯಪುರ ಉಪಸ್ಥಿತರಿದ್ದರು. ಸಿಆರ್ಿ ಎಸ್.ಎಂ. ಪಾಲಕಿ, ಶಿಕ್ಷಕ ಬಿ.ಜಿ. ಫತ್ತೇಪುರ ಹಾಗೂ ಇತರರು ಭಾಗವಹಿಸಿದ್ದರು. ನೂತನವಾಗಿ ಶಾಲೆಗೆ ಪ್ರವೇಶ ಪಡೆದ 18 ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಆರ್ಿ ಬಾಲಾಜಿ ವಿಜಯಪುರ ಅವರು ಶಾಲಾ ಬಾಗಿಲು ತೆರೆಯುವ ಘೋಷಣೆಯನ್ನು ಮಾಡಿದರು. ಶಿಕ್ಷಕ ರಾಘವೇಂದ್ರ ಬಾಕಲಿ ಕಾರ್ಯಕ್ರಮ ನಿರ್ವಹಿಸಿದರು. ಬಿಳೆಭಾವಿ ಗ್ರಾಮದಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಆರಂಭವಾಗಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 