ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡಲಾದ ಬಜೆಟ್
ಧಾರವಾಡ 01: ಕೇಂದ್ರ ಬಜೆಟ್‌ನ್ನು ಅವಲೋಕಿಸಿದಾಗ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಲ್ಲಿ ವಿಶೇಷವಾಗಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಘೋಷಿಸಲಾಗಿದೆ. 5 ಋಗಿ ವಿಸ್ತರಿಸುವುದು ಹಾಗೂ ವೈದ್ಯಕೀಯ ಶಿಕ್ಷಣಕ್ಕೆೆ ಹೊಸದಾಗಿ 10,000 ಸಿಟುಗಳನ್ನು ಮುಂದಿನ ವರ್ಷಕ್ಕೆ ಹೆಚ್ಚಿಸಲಾಗಿದೆ. ಕೃತಕ ಬುದ್ಧಿ ಮತ್ತೆ ಕೇಂದ್ರಗಳಿಗೆ ರೂ.500/- ಕೋಟಿ ಅನುದಾನ ನೀಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವುದು. ಒಟ್ಟಾರೆಯಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಬಜೆಟ್ ಆಶಾದಾಯಕವಾಗಿದೆ ಎಂದು ಹೇಳಿದರು.