ಕಾಲಜ್ಞಾನಿ ಯೋಗಿನಾರೇಯಣ ಕೈವಾರ ತಾತಯ್ಯನವರ ಆದರ್ಶ ಗುಣ ಅಳವಡಿಸಿಕೊಳ್ಳಲು ಕರೆ

A call to adopt the ideal qualities of the timekeeper Yoginareyana Kaivara Tataiah

ಕಾಲಜ್ಞಾನಿ ಯೋಗಿನಾರೇಯಣ ಕೈವಾರ ತಾತಯ್ಯನವರ ಆದರ್ಶ ಗುಣ ಅಳವಡಿಸಿಕೊಳ್ಳಲು ಕರೆ 

ಬಳ್ಳಾರಿ 14: ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಕಾಲಜ್ಞಾನಿಯಾಗಿದ್ದರು. ಅಪಾರ ಜ್ಞಾನ ಹೊಂದಿದ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಡ್ಡರಬಂಡೆಯ ಬಲಿಜ ಭವನದಲ್ಲಿ ಶುಕ್ರವಾರ ಏರಿ​‍್ಡಸಿದ್ದ ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಕೈವಾರ ತಾತಯ್ಯನವರು ಒಂದೇ ಸಮಾಜಕ್ಕೆ ಸೀಮಿತರಾದವರಲ್ಲ, ಜಾತಿಹಿಮತಗಳ ಕುಲಗೋತ್ರಗಳ ವರ್ಣಭೇದವನ್ನು ಖಂಡಿಸುತ್ತಾ ದೀನಹಿದಲಿತರಹಿಶೋಷಿತರ ಉದ್ಧಾರಕ್ಕಾಗಿ ಶ್ರಮಿಸಿದವರು ಎಂದು ತಿಳಿಸಿದರು.  ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶ ಗುಣಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಾಕರಾದ ಅಲಂ ಭಾಷಾ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಜಾತಿ ಎಲ್ಲೆ ಮೀರಿದವರು ಶರಣರಾಗುತ್ತಾರೆ. ಅಂತಹ ಶರಣರ ಸಾಲಿನಲ್ಲಿ ಯೋಗಿ ನಾರೇಯಣ ಯತಿಂದ್ರ ಕೈವಾರ ತಾತಯ್ಯನವರೂ ಇದ್ದರು ಎಂದು ಹೇಳಿದರು.  ಕೈವಾರ ತಾತಯ್ಯ ಎಂದೇ ಪ್ರಸಿದ್ಧಿಯಾಗಿರುವ ಶ್ರೀ ಯೋಗಿ ನಾರೇಯಣ ಯತಿಂದ್ರ ಅವರು ಪದ್ಯ, ಕೀರ್ತನೆ ಹಾಗೂ ಸ್ತೋತ್ರಗಳ ಮೂಲಕ ಸಾಹಿತ್ಯ ರೂಪದಲ್ಲಿ ಜನತೆಗೆ ತಿಳಿಸಿಕೊಟ್ಟ ಮಹಾನ್ ಯೋಗಿಯಾಗಿದ್ದರು ಎಂದರು.  ಬಳೆ ವ್ಯಾಪಾರಿಯಾಗಿದ್ದ ಕೈವಾರ ತಾತಯ್ಯನವರು, ಲೋಕದ ಸ್ತ್ರೀಯರೆಲ್ಲ ತಾಯಿ ಸಮಾನರೆಂದು ಭಾವಿಸಿ ಹೆಣ್ಣುಮಕ್ಕಳಿಗೆ, ಸುಮಂಗಲಿಯರಿಗೆಲ್ಲ ಶುದ್ಧಭಾವದಿಂದ ಬಳೆತೊಡಿಸುತ್ತಿದ್ದರು. ಅವರು ಕೊಟ್ಟ ಕಾಸನ್ನಷ್ಟೇ ಪಡೆಯುತಿದ್ದರು ಎಂದರು. ಪ್ರಪಂಚದಲ್ಲಿಯೇ ಮುಂದೊಂದು ದಿನ ನಡೆಯಬಹುದಾದ ಪಾಪ ಕೃತ್ಯಗಳ ಪ್ರಾಬಲ್ಯ, ಸಂಪತ್ತಿನ ವಿನಾಶ, ಘೋರ ವೈಪರಿತ್ಯಗಳು, ಭ್ರಷ್ಟಾಚಾರ, ದೌರ್ಜನ್ಯ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಧಾರ್ಮಿಕವಾಗಿ ನಡೆಯುವ ಅನ್ಯಾಯದ ಘಟನೆಗಳನ್ನು ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಕಾಲಜ್ಞಾನದಲ್ಲಿ ತಿಳಿಸಿದ್ದಾರೆ. ಅನೇಕ ಪವಾಡಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು. ಪ್ರಸ್ತುತದಲ್ಲಿ ಯುವ ಪೀಳಿಗೆಯು ಮೊಬೈಲ್ ವ್ಯಸನಕ್ಕೆ ದಾಸರಾಗಿದ್ದಾರೆ. ಹಾಗಿದ್ದಾಗ ಶರಣರ, ದಾಸರ ಪವಾಡ ಕಾರ್ಯಗಳನ್ನು ಅರಿಯುವುದಾದರೂ ಹೇಗೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಶರಣರ ಕಾಯ ಕಲ್ಪಗಳ ಬಗ್ಗೆ ಮುಂದಿನ ಪೀಳಿಗೆಗೆ ಮಾಹಿತಿ ತಿಳಿಸುವ ಕಾರ್ಯವಾಗಬೇಕಿದೆ ಎಂದರು.  ಕಾರ್ಯಕ್ರಮದಲ್ಲಿ ಬಳ್ಳಾರಿಯ ಲಕ್ಷ್ಮಿ ಪವನ್ ಕುಮಾರ್ ತಂಡದಿಂದ ಭಕ್ತಿ ಸಂಗೀತ ಗಾಯನಗಳನ್ನು ಪ್ರಸ್ತುತಪಡಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.