ಬೆಳ್ಳಂ ಬೆಳಗ್ಗೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ
ಮುಂಡಗೋಡ 17: ಪಟ್ಟಣದಲ್ಲಿ ಬೆಳ್ಳಂ ಬೆಳಗ್ಗೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪಟ್ಟಣದ ಶಿರಸಿ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಘಟನೆ ನಡದಿದೆ. ಶಿರಸಿಯಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬೆಳ್ಳಂ ಬೆಳಗ್ಗೆ ಇಬ್ಬನಿ ಬಿದ್ದ್ ಪರಿಣಾಮ ಸರಿಯಾದ ರಸ್ತೆ ಕಾಣದೇ ಪಟ್ಟಣದ ಶಿರಸಿ ರಸ್ತೆಯಲ್ಲಿ ಶಿವರಾಜ ಹೊಂಡಾ ಬೈಕ್ ಶೋ ರೂಂ ಬಳಿಯ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಇದ್ದ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕಾರಿನ ಮುಂಭಾಗ ಜಖಂಗೊಂಡಿದೆ.