ಗೋಕಾಕ 23: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 340ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ದೊರಕಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಬಂದಿರುವುದಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಕರ್ಾರ ಕಳೆದ 5 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಸಹಕಾರಿಯಾಗಿವೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತ ಪ್ರಪಂಚದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಡೀ ಪ್ರಪಂಚವೇ ಭಾರತದತ್ತ ನೋಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಅಮೀತ ಶಾ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಮುಂದಿನ 10-15 ವರ್ಷಗಳಲ್ಲಿ ಬಿಜೆಪಿ ಭಾರೀ ಬಹುಮತದಿಂದ ಅಧಿಕಾರ ನಡೆಸಲಿದೆ. ದೇಶದೆಲ್ಲೆಡೆ ನರೇಂದ್ರ ಮೋದಿ ಅವರ ಅಲೆ ಇರುವುದು ಈ ಚುನಾವಣೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಮೋದಿ ಅಲೆಯಿಂದಾಗಿಯೇ ವಿರೋಧ ಪಕ್ಷಗಳು ಧೂಳಿಪಟವಾಗಿವೆ ಎಂದು ಹೇಳಿದ್ದಾರೆ.
ಕನರ್ಾಟಕದಲ್ಲಿ 28 ಸ್ಥಾನಗಳ ಪೈಕಿ 25 ಸ್ಥಾನಗಳಲ್ಲಿ ಅಭೂತಪೂರ್ವ ಜಯ ದಾಖಲಿಸಿರುವ ಬಿಜೆಪಿ ರಾಜ್ಯದಲ್ಲಿನ ಮೈತ್ರಿ ಸಕರ್ಾರದಲ್ಲಿನ ಒಡುಕು ಹಾಗೂ ಕೇಂದ್ರ ಸಕರ್ಾರದ ಸಾಧನೆಗಳು ಗೆಲುವಿಗೆ ಪೂರಕವಾಗಿವೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ಸುರೇಶ ಅಂಗಡಿ ಮತ್ತು ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಭಿನಂದಿಸಿದ ಅವರು, 77ರ ಇಳಿವಯಸ್ಸಿನಲ್ಲಿಯೂ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭ್ಯಥರ್ಿಗಳ ಜಯಶಾಲಿಗೆ ಕಾರಣರಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದಿಸಿದ್ದಾರೆ.
ಹೊಸ ಶಕೆ ಆರಂಭ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಹೊಸ ಶಕೆ ಆರಂಭವಾಗಲಿದ್ದು, ಬಿಜೆಪಿಗೆ ವರದಾನವಾಗಿ ಪರಿಣಮಿಸಲಿದೆ. ಬದಲಾದ ರಾಜಕೀಯ ಸ್ಥಿತಿಯಲ್ಲಿ ರಾಜ್ಯದಲ್ಲಿ ಹೊಸ ಸಕರ್ಾರ ರಚನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.