ವಿಕಸಿತ ಭಾರತ ಎಲ್ಲರ ಜವಾಬ್ದಾರಿಯಾಗಲಿ ಪ್ರೊ ತ್ಯಾಗರಾಜ
ಭಾರತೀಯರಾದ ನಾವು ನಮಗೆ ದೊರೆತಿರುವ ಪೌರತ್ವವನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕಾಗಿದೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ್ ಹೇಳಿದರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ಸೌತ್ ರೀಜಿನಲ್ ಸೆಂಟರ್, ಹೈದ್ರಾಬಾದ್(ಋಖಖ-ಖಖಅ) ಹಾಗೂ ವಿಶ್ರೀಕೃ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಸಹಯೋಗದಲ್ಲಿ ವಿಕಸಿತ ಭಾರತ ಅ2047 ಭಾರತದಲ್ಲಿ ಸಾಂವಿಧಾನಿಕ, ಶಾಸಕಾಂಗ ಮತ್ತು ನ್ಯಾಯಾಂಗ ಸುಧಾರಣೆಗಳು’ ಕುರಿತಾದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಣ್ಯರೊಂದಿಗೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿಕಸಿತ ಭಾರತದ ಅಭಿವೃದ್ಧಿ ಕನಸು ಎಲ್ಲರ ಜವಾಬ್ದಾರಿಯಾಗಲಿ. ಹಲವಾರು ರಾಜಕೀಯ ಚಿಂತಕರು ಸಮಾಜವನ್ನು ಅಭಿವೃದ್ಧಿಯತ್ತ ಸಾಗಲು ಶ್ರಮಿಸಿದ್ದಾರೆ. ನಮ್ಮ ಹಕ್ಕುಗಳು ಜವಾಬ್ದಾರಿಗಳ ಕುರಿತಂತೆ ಪ್ರಶ್ನೆ ಕೇಳುವ ಮನೋಭಾವ ಪ್ರಬಲವಾಗಬೇಕಾಗಿದೆ. ರಾಜಕೀಯ ಚಿಂತಕರನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ಸಾಗುತ್ತಲೇ ಇದೆ. ರಾಜ್ಯಶಾಸ್ತ್ರದ ವಿದ್ಯಾರ್ಥಿಗಳಾದ ನೀವು ಪ್ರಶ್ನಿಸುವ ಮನೋಭಾವದ ಜೊತೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ. ರಾಜಕೀಯ ಪಕ್ಷಗಳಿಗೆ ದೇಶಕ್ಕಿಂತ ಪಕ್ಷ ಮುಖ್ಯವಾಗಿದೆ. 2047ರ ಹೊತ್ತಿಗೆ ಯುವಕರು ರಾಷ್ಟ್ರ ರಾಜಕಾರಣದ ಅಧಿಕಾರ ಚುಕ್ಕಾಣಿ ಹಿಡಿಯಲ್ಲಿದ್ದಾರೆ ಎಂದು ಹೇಳಿದರು.
ಮುಖ್ಯ ಭಾಷಣಕಾರರಾಗಿ ಆಂಧ್ರ್ರ್ರದೇಶದ ಕೇಂದ್ರೀಯ ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಜಿ. ರಾಮ್ ರೆಡ್ಡಿ ಮಾತನಾಡಿ ರಾಷ್ಟ್ರೀಯ ರಕ್ಷಣೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಸಮರೆ್ಣಯಿಂದ ಪ್ರತಿಯೊಬ್ಬ ಭಾರತೀಯನು ಜವಾಬ್ದಾರಿಯಿಂದ ವರ್ತಿಸಿದೆರೆ ವಿಕಸಿತ ಭಾರತದ ಕನಸು ನೆರವೇರಲಿದೆ. ಸಂವಿಧಾನ, ಶಾಸಕಾಂಗ ಮತ್ತು ನ್ಯಾಯಾಂಗ ಸುಧಾರಣೆಯ ಮೇಲೆ ಎಲ್ಲರೂ ಗಮನ ಹರಿಸುವುದು ಮುಖ್ಯವಾಗಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಸಂವಿಧಾನವು ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.
ವಿವಿಯ ಕುಲಸಚಿವರಾದ ಎಸ್ ಎನ್ ರುದ್ರೇಶ್ ಮಾತನಾಡಿ ಭವಿಷ್ಯದಲ್ಲಿ ಶಿಕ್ಷಣ ಅಭಿವೃದ್ಧಿಯಾಗದಿದ್ದರೆ ವಿಕಸಿತ ಭಾರತ ಅಸಾಧ್ಯ. ಶಿಕ್ಷಣ ಹಾಗೂ ಸಾಮಾಜಿಕ ಜವಾಬ್ದಾರಿಯಿಂದ ವಿಕಸಿತ ಭಾರತಕ್ಕೆ ನಾವೆಲ್ಲ ಕೈಜೋಡಿಸೋಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ ಭವಿಷ್ಯದ ಭಾರತ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಅಪಾರವಾಗಿದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಲು ಕೌಶಲ್ಯಯುತ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಸ್ವ ಕುಟುಂಬವನ್ನು ಸದೃಢಗೊಳಿಸಿದರೆ ದೇಶವು ತಾನಾಗಿಯೇ ಬಲಗೊಳ್ಳುತ್ತದೆ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು ಎಂದು ತಿಳಿಸಿದರು. ಸಮಾಜ ವಿಜ್ಞಾನ ನಿಕಾಯ ಡೀನರಾದ ಡಾ. ಗೌರಿ ಮಾಣಿಕ ಮಾನಸ ಸಮ್ಮೇಳನದ ಸಂಯೋಜಕರಾದ ಡಾ ವಿಜಯಕುಮಾರ್ ವೇದಿಕೆಯಲ್ಲಿದ್ದರು. ಡಾ ಮೋಹನದಾಸ್ ಅತಿಥಿಗಳನ್ನು ಪರಿಚಯಿಸಿದರು. ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಅನ್ಯ ರಾಜ್ಯಗಳ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಎಲ್ಲ ನಿಕಾಯಗಳ ಡೀನರು ವಿಭಾಗಗಳ ಮುಖ್ಯಸ್ಥರು ಬೋಧಕ ಬೋಧಕೇತರ ಸಿಬ್ಬಂದಿ ಸಂಶೋಧನಾ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.