ಪರಿಸರ ಸೇವಾ ಸಮಿತಿಯಿಂದ ವಿಶ್ವನಾಥ ಚ. ಸಜ್ಜನರ ಗೆಳೆಯರ ಬಳಗದವರು ಆಯೋಜಿಸಿದ್ದ ಅಭಿನಂದನಾ ಸಮಾರಂಭ
A felicitation ceremony organized by the Environmental Service Committee and the Friends of Vishwan
ಹುಬ್ಬಳ್ಳಿ 03: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಹುಬ್ಬಳ್ಳಿಯ ಹೆಮ್ಮೆಯ ಸುಪುತ್ರ, ಹೈದರಾಬಾದ ನಗರ ಪೊಲೀಸ್ ಆಯುಕ್ತರು, ಸಮಾಜ ಮುಖಿ ಚಿಂತಕರು, ದೈರ್ಯ ಸಾಹಸಕ್ಕೆ ಹೆಸರಾದ, ಅನುಭಾವಿಗಳು, ಶರಣ ಜೀವಿಗಳಾದ ವಿಶ್ವನಾಥ ಚ. ಸಜ್ಜನರ ಅವರು ಹೈದರಾಬಾದ ನಗರ ಪೊಲೀಸ್ ಆಯುಕ್ತರಾಗಿ ಪದೋನ್ನತಿ ಹೊಂದಿದ ಪ್ರಯುಕ್ತ ಹುಬ್ಬಳ್ಳಿಯ ವಿಶ್ವನಾಥ ಸಜ್ಜನರ ಗೆಳೆಯರ ಬಳಗದವರು ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಮೊದಲು ಬಿವಿಬಿ ಆವರಣದಲ್ಲಿ ತೆರೆದ ವಾಹನದಲ್ಲಿ ವಿಶ್ವನಾಥ ಚ. ಸಜ್ಜನರ ಹಾಗೂ ಅನೂಪಾ ಅವರನ್ನು ಭವ್ಯ ಮೆರವಣಿಗೆಯಲ್ಲಿ ಪುಷ್ಾರ್ಾಣೆ ಮಾಡುವ ಮೂಲಕ ಹೃದಯ ಸ್ಪರ್ಷಿಯಾಗಿ ಸ್ವಾಗತಿಸುವ ಶುಭ ಸಂದರ್ಭದಲ್ಲಿ ಐಪಿಎಸ್ ಅಧಿಕಾರಿ ವಿಶ್ವನಾಥ ಚ. ಸಜ್ಜನರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಗ್ರಂಥ ನೀಡಿ ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಪರಿಶ್ರಮ ಹಾಗೂ ಸಾಧನೆಗಳ ಮೂಲಕ ಹಂತ ಹಂತವಾಗಿ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯದಕ್ಷತೆ ಹಾಗೂ ನಿಸ್ವಾರ್ಥ ಸೇವೆಯ ಮೂಲಕ ಪ್ರಾಮಾಣಿಕ ಅಧಿಕಾರಿಯಾಗಿ ಮನ್ನಣೆ ಗಳಿಸಿರುವ ವಿಶ್ವನಾಥ ಚ. ಸಜ್ಜನರ ಅವರಿಗೆ ಪೊಲೀಸ್ ಇಲಾಖೆಯಲ್ಲಿ ಯಶಸ್ಸು ದೊರೆಯಲಿ, ಅವರ ಸಾಧನೆ ಹೀಗೆ ಮುಂದುವರೆಯಲಿ, ಪರಮಾತ್ಮ ಉತ್ತಮ ಆರೋಗ್ಯ ಭಾಗ್ಯ ನೀಡಿ ಹರಸಲಿ, ನಿರಂತರ ಶ್ರಮ, ಕಾರ್ಯಗಳು ಯಶಸ್ವಿಯಾಗಲಿ ಎಂದು ಶುಭ ಕೋರಿದರು. ಸುಜಯ ಸುರೇಶ ಹೊರಕೇರಿ, ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರೊ ನಟರಾಜ, ಸಿಎ ಚನ್ನವೀರ ಮುಂಗುರವಾಡಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ರಾಜಶೇಖರ ಬತ್ಲಿ, ಡಾ. ವಿಶ್ವನಾಥ ಕೊರವಿ, ಹಲವಾರು ಗಣ್ಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 