ಸಿದ್ದಾರೂಢಸ್ವಾಮಿಜಿ ರೈಲು ನಿಲ್ದಾಣದ ಪ್ರವೇಶದ್ವಾರದಲ್ಲಿ ವೀರ ಸಂನ್ಯಾಸಿ ಸ್ವಾಮಿವಿವೇಕಾನಂದರ ಕಂಚಿನ ಪುತ್ಥಳಿಗೆ ಮಾಲಾರೆ್ಣ
A garland is placed on the bronze statue of the heroic monk Swami Vivekananda at the entrance of Si
ಹುಬ್ಬಳ್ಳಿ 12 : ದೇಶದ ಯುವಕರಿಗೆ ಆತ್ಮಶಕ್ತಿ ಹಾಗೂ ಆಂತರ್ಯದ ಸತ್ವ ತುಂಬುವಲ್ಲಿ ಅಭೂತ ಪೂರ್ವ ಯಶಸ್ಸು ಸಾದಿಸಿದ ಶ್ರೇಷ್ಠ ಸಂತ, ಮಹಾತ್ಮ, ಅದ್ಭುತ ತತ್ವಜ್ಞಾನಿ ಸ್ವಾಮಿವಿವೇಕಾನಂದ ಅವರ ಜಯಂತಿ ಪ್ರಯುಕ್ತ ಸಿದ್ದಾರೂಢಸ್ವಾಮಿಜಿ ರೈಲು ನಿಲ್ದಾಣದ ಪ್ರವೇಶದ್ವಾರದಲ್ಲಿ ವೀರ ಸಂನ್ಯಾಸಿ ಸ್ವಾಮಿವಿವೇಕಾನಂದರ ಕಂಚಿನ ಪುತ್ಥಳಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಿದರು. ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷರು, ಮುಖಂಡರಾದ ಸದಾನಂದಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡ ಶೆಟ್ಟರ, ಸಂಭಾಜಿಕಲಾಲ್,ಯುವಕರು,ಮುಂತಾದವರು ಇದ್ದರು.
ಸದಾನಂದ ಡಂಗನವರ ಮಾತನಾಡಿ ಯುವಕರು ದೇಶದ ಆಸ್ತಿಆಗಬೇಕು. ಮನುಕುಲದ ಉದ್ಧಾರಕ್ಕೆ ಅವತರಿಸಿ ಬಂದವರು ಸ್ವಾಮಿವಿವೇಕಾನಂದರು.ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನುಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಕರಿಗೆ ಸ್ಪೂರ್ತಿ, ಚೈತನ್ಯದ ಚಿಲುಮೆ ಆಗಿದ್ದಾರೆ. ಭಗವಾನ್ಶ್ರೀ ರಾಮಕೃಷ್ಣ ಪರಮಹಂಸ ರತತ್ವಗಳನ್ನು ಜಗತ್ತಿನಾದ್ಯಂತ ಬಿತ್ತರಿಸಿದರು.ವಿಚಾರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಠ್ಯದಲ್ಲಿ ಅಳವಡಿಸಬೇಕು. ಸ್ವಾಮಿ ವಿವೇಕಾನಂದರ ಸಾಹಿತ್ಯ, ಬದುಕು, ಬರಹಗಳನ್ನು ಯುವಕರು ಓದಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಸ್ವಾಮಿವಿವೇಕಾನಂದರ ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 