ಬೃಹತ್ ಉದ್ಯೋಗ ಮೇಳ

A huge job fair

ಬೃಹತ್ ಉದ್ಯೋಗ ಮೇಳ 

ಹುಬ್ಬಳಿ 04 : ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್‌.ಪಿ. ಫೌಂಡೇಶನ್ ನವಲಗುಂದ ಇವುಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ  8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 30 ಕ್ಕೂ ಅಧಿಕ ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಲಿದ್ದು, ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್‌.ಎಸ್‌.ಎಲ್‌.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಾಸಾದ 18 ರಿಂದ 35 ವಯೋಮಿತಿ ಹೊಂದಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ ಆಧಾರಕಾರ್ಡ, ಬಯೋಡಾಟಾ, ಇತ್ತೀಚಿನ ಭಾವಚಿತ್ರ (ರೆಸ್ಯೂಮ) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಮೇಳದಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳು ಣಣಠಿ://ಜಿಠ.ರಟಜ/ಡಜಣಞಇಐರಿಖಿಜಅ1ಉಆ68 ವೆಬ್ ಸೈಟ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು.  ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9535360259, 8453208555, 9806905751, 9164192155 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.  

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ 

ಹುಬ್ಬಳಿ 4 : ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ 2024 ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.  

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ, ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರದೀಪ ದ್ಯಾಮಕ್ಕನವರ, ಮಂಜುನಾಥ ಗಾಣಿಗೇರ, ರಜೆಯದ್ದೀನ ಮುಲ್ಲಾ, ಶಿವಕ್ಕ ಬಂಗಾರಬಳಿ, ಮಲ್ಲಿಕಾರ್ಜುನಗೌಡ ಭರಮಗೌಡ್ರ, ಸಿದ್ಧಾರ್ಥ ಮಲ್ಲಮ್ಮನವರ, ಸುರೇಶ ಸಾಳ, ಹನುಮಂತಗೌಡ ರಾಯನಗೌಡ್ರ, ಗುರುಶಾಂತ ಪಾಟೀಲ, ಬಸವ್ವ ತಳವಾರ, ಕುಮಾರ ತೋಟದ, ಇಮಾಮಸಾಬ ಪೀರಖಾನ, ಬಸಪ್ಪ ನರೇಗಲ್ಲ, ಮಂಜುನಾಥ ಗೋಜಿನೂರ, ತಾಲೂಕು ಪಂಚಾಯತಿಯ ನಾರಾಯಣ ಕುರಹಟ್ಟಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಬಸಂತ ಪಿ.ಎನ್‌., ರೂಪಾ, ರೋಹಿತ್, ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.