ಫೆ. 14 ರಂದು ನಡೆಯಲಿರುವ ಬೃಹತ್ ರಾಜ್ಯಮಟ್ಟದ ಹಕ್ಕುಪತ್ರ ವಿತರಣಾ ಸಮಾವೇಶ
A massive state-level charter distribution conference to be held on Feb. 14
ಹಾವೇರಿ 10 : ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಫೆಬ್ರವರಿ 14 ರಂದು ರಾಜ್ಯಮಟ್ಟದ ಎರಡನೇ ಬೃಹತ್ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.ಇದಕ್ಕೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ ಹೇಳಿದರು. ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಮಾವೇಶದ ಸಕಲ ತಯಾರಿ ಕುರಿತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾವೇರಿ ಹಾಗೂ ಇತರೆ 8 ಜಿಲ್ಲೆಗಳನ್ನು ಸೇರಿ ಒಂದು ಲಕ್ಷ ಫಲಾನುಭವಿಗಳಿಗೆ ಫೆ 14 ರಂದು ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಸರ್ಕಾರ ಜಾರಿಗೆ ತಂದಿರುವ ಮಹತ್ವದ ಗ್ಯಾರಂಟಿ ಯೋಜನೆಗಳ ಜೊತೆಗೆ ಈಗ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟು ಕಂದಾಯ ಗ್ಯಾರಂಟಿ ನೀಡಲು ಮುಂದಾಗಿದೆ ಇದು ಐತಿಹಾಸಿಕವಾಗಲಿದೆ. ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಸಮಾವೇಶಕ್ಕಿಂತಲೂ ಉತ್ತಮವಾಗಿ ಆಯೋಜಿಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ,ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿಗಳನ್ನು ರಚಿಸಿಕೊಂಡು ಹಗಲಿರಳು ಕೆಲಸ ಮಾಡುತ್ತಿದ್ದಾರೆ. ನಾವೆಲ್ಲರೂ ಸೇರಿ ಶಕ್ತಿ ಮೀರಿ ಕೆಲಸ ಮಾಡಿ ಸಮಾವೇಶವನ್ನು ಯಶಸ್ವಿಗೊಳಿಸಬೇಕಿದೆ,
ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಸಮಾವೇಶವು ಇಡೀ ದೇಶಕ್ಕೆ ಮಾದರಿಯಾಗಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಸಚಿವ ಸಂಪುಟದ ಬಹುತೇಕ ಎಲ್ಲ ಸಚಿವರ ಭಾಗವಹಿಸಲಿದ್ದಾರೆ,ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಯಾವುದೇ ಲೋಪದೋಷಗಳು ಆಗದಹಾಗೆ ಎಚ್ಚರಿಕೆಯಿಂದ ತಮಗೆ ವಹಿಸಿರುವ ಕೆಲಸವನ್ನು ನಿರ್ವಹಿಸಬೇಕು ಮತ್ತು ಜಿಲ್ಲೆಗೆ ಹೆಸರು ತರಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಿಂದ 30,204 ಫಲಾನುಭವಿಗಳು ಕಂದಾಯ ಗ್ರಾಮಗಳ ಹಕ್ಕುಪತ್ರ, ಇ-ಪಾವತಿ ಪತ್ರಗಳು ಮತ್ತು ಬಗರ್ ಹುಕುಂ ಪತ್ರದ ಹಕ್ಕುಗಳನ್ನು ಪಡೆಯಲಿದ್ದಾರೆ.
ಹಾವೇರಿ ಜಿಲ್ಲೆಯಿಂದ 50,000, ದಾವಣಗೆರೆ 20,000, ಶಿವಮೊಗ್ಗ, ಧಾರವಾಡ ಹಾಗೂ ಗದಗ ಜಿಲ್ಲೆಯಿಂದ ತಲಾ 10,000, ಚಿಕ್ಕಮಗಳೂರು 7,000, ಚಿತ್ರದುರ್ಗ 5,500, ಕೊಪ್ಪಳ 8,000 ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ 1,000 ಜನರು ಹಕ್ಕು ಪತ್ರ ಪಡ್ರೆದುಕೊಳ್ಳಲಿದ್ದಾರೆ. ಫಲನುಭವಿಗಳನ್ನು ಸಮಾವೇಶಕ್ಕೆ ಕರೆ ತರಲು 800 ಕೆಎಸ್‌ಆರ್ಟಿಸಿ ಬಸ್ಸುಗಳು, 75 ಖಾಸಗಿ ಬಸ್ಸುಗಳು ಹಾಗೂ 200 ಶಾಲಾ ವಾಹನಗಳನ್ನು ಬಳಿಸಿಕೊಂಡು ವ್ಯವಸ್ಥಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮದ ಭದ್ರತೆಗಾಗಿ 3500 ಕ್ಕಿಂತಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು. ಸಭೆಯಲ್ಲಿ ತಹಸೀಲ್ದಾರ್ ಶರಣಮ್ಮ ಕೆ, ಆಯಾ ತಾಲೂಕಿನ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 