ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಭೇರ್

A meaningful celebration of the Jayanti of Hon.: Additional Collector Muhammad Zubher

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಭೇರ್ 

ಬಳ್ಳಾರಿ 24: ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಮತ್ತು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು. ಸೋಮವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರಿ​‍್ಡಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಏ.02 ರಂದು ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಛಯ ಸಭಾಂಗಣದಲ್ಲಿ ಮತ್ತು ಏ.10 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ತೇರುಬೀದಿ ರಸ್ತೆಯ ಮಹಾವೀರ ಜೈನರ ದೇವಸ್ಥಾನದ ಹಾಲ್‌ನಲ್ಲಿ ಅರ್ಥಪೂರ್ಣ ಆಚರಣೆಗೆ ಕ್ರಮ ವಹಿಸಲಾಗುವುದು ಎಂದರು. ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಅಂಗವಾಗಿ ಮೆರವಣಿಗೆಯು ದೇವಸ್ಥಾನದಿಂದ ಬೆಂಗಳೂರು ರಸ್ತೆ-ಬ್ರಾಹ್ಮೀಣ್ ಸ್ಟ್ರೀಟ್‌-ಕಾಳಮ್ಮ ಬಜಾರ್ ನಿಂದ ಮರಳಿ ದೇವಸ್ಥಾನದ ವರೆಗೆ ನಡೆಯಲಿದ್ದು, ರಸ್ತೆ ಸಂಚಾರ ಮಾರ್ಗಕ್ಕೆ ವ್ಯವಸ್ಥೆ ಮಾಡಬೇಕು. ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಸ್ವಚ್ಛತೆ ಕಾರ್ಯ  ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಮಹನೀಯರ ವಿಚಾರಧಾರೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು. ಜಯಂತಿ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು. ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ-ಸೂಚನೆ ನೀಡಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.