ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶಿಸಲು ವೇದಿಕೆ ಅವಶ್ಯಕ : ದುಂಡಿಗೌಡ್ರ
A platform is necessary for students to showcase their talent: Dundigowdra
ಶಿಗ್ಗಾವಿ 17 : ಎಲ್ಲಾ ವಿದ್ಯಾರ್ಥಿಗಳಿಗೂ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಅವಶ್ಯಕತೆಯಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಪಟ್ಟಣದ ಉರ್ದು ಶಾಲೆಯಲ್ಲಿ ನಡೆದ ಶಿಗ್ಗಾವಿ ಕ್ಲಸ್ಟರ್ ಮಟ್ಟದ ಉರ್ದು ಶಾಲೆಗಳ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಆಗಾಧವಾದ ಪ್ರತಿಭೆಯಿದ್ದು ಅದನ್ನು ಗುರುತಿಸಲು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಅವಶ್ಯಕ ಹಾಗೂ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವ ವಿವಿಧ ಕೌಶಲ್ಯಾಧಾರಿತ ಚಟುವಟಿಕೆ ಕಾರ್ಯಕ್ರಮಗಳು ಈ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಇರುವದರಿಂದ ಎಲ್ಲಾ ಮಕ್ಕಳು ಭಾಗವಹಿಸಿ ಅನುಕರಣೆ ಮಾಡುವದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಲಹೆ ನೀಡಿದರು ಸೇರಿರುವ ಎಲ್ಲರೂ ವಿದ್ಯಾರ್ಥಿಗಳಿಗೆ ಇಂತಹ ವೇದಿಕೆ ಕಲ್ಪಿಸಲು ಸಹಕರಿಸಬೇಕೆಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಬಿ. ಇ. ಓ. ಎಂ.ಬಿ. ಅಂಬಿಗೇರ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಗಿರಿಜವ್ವ ದೊಡ್ಮನಿ, ಎಸ್. ಡಿ. ಎಂ. ಸಿ. ಅಧ್ಯಕ್ಷ ಖಾಜಾಮೋದಿನ ಶೇಕಸನದಿ, ಗ್ರಾ.ಪಂ. ಸದಸ್ಯ ವೀರಭದ್ರ್ಪ ಅಂಗಡಿ, ಶಿಕ್ಷಣ ಸಂಯೋಜಕ ಅಬ್ದುಲ ಖಾದರ್ ಕಡೇಮನಿ, ಉಮೇಶ ಎಸ್.ಬನ್ನೂರ ಪ್ರೌಢ ಶಾಲೆ ಪ್ರಧಾನ ಗುರುಗಳಾದ ಬಿ. ಶ್ರೀನಿವಾಸ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಅರುಣಗೌಡ ಹುಡೇದಗೌಡ್ರ, ಉರ್ದು ಶಾಲೆ ಪ್ರಧಾನ ಗುರುಗಳಾದ ಎಂ. ಬಿ. ಬ್ಯಾಡಗಿ ಹಾಗೂ ಸಿ. ಆರ್. ಪಿ. ಬಿ. ಆರ್. ಕಮದೋಡ ಸೇರಿದಂತೆ ಶಿಕ್ಷಕವೃಂದ ವಿದ್ಯಾರ್ಥಿಗಳು ಪಾಲಕರು ಸಾರ್ವಜನಿಕರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 